Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಸಿಎಂ
  • Politics
  • State

ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಸಿಎಂ

admin August 9, 2025 1 minute read
WhatsApp Image 2025-08-09 at 15.06.30
Spread the love

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ  ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣ ದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಮತಗಳ್ಳತನದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದು, ಬಿಬಿಎಂಪಿ ಚುನಾವಣೆ ಮುನ್ನ ಪಕ್ಷ ಇದನ್ನು ಪರಿಶೀಲಿಸುತ್ತದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸಿದರು.

ಪರಿಶೀಲನಾ ಕಾರ್ಯವನ್ನು ತ್ವರಿತವಾಗಿ ನಡೆಸಿ ವರದಿ ನೀಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗುವುದು ಎಂದರು. ಮತದಾರರ ಪಟ್ಟಿಯ ಸಂಬಂಧ ಸಂಪೂರ್ಣ ಅಧಿಕಾರವಿರುವುದು ಚುನಾವಣಾ ಆಯೋಗಕ್ಕೆ ಎಂದರು.

3ಸಾವಿರ ಮತ ಖರೀದಿ ಬಗ್ಗೆ ತಿಳಿದಿಲ್ಲ

ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಮುಖ್ಯಮಂತ್ರಿಗಳು ಬಾದಾಮಿ ಕ್ಷೇತ್ರದಲ್ಲಿ ಮೂರು ಸಾವಿರ ಮತಗಳನ್ನು ಖರೀದಿ ಮಾಡಿ ಗೆದ್ದದ್ದು ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಇಬ್ರಾಹಿಂ ನಮ್ಮ ಪಕ್ಷದವರಲ್ಲ. ನಾನು ನಾಮನಿರ್ದೇಶನ ಸಲ್ಲಿಸಲು ಹಾಗೂ ಪ್ರಚಾರಕ್ಕಾಗಿ ಬಾದಾಮಿಗೆ ಹೋಗಿದ್ದೆ. ಅದು ಬಿಟ್ಟರೆ ನನಗೆ ಏನೂ ಗೊತ್ತಿಲ್ಲ. ನಾನು 1600 ಮತಗಳಿಂದ ಗೆದ್ದಿದ್ದು. ಈ ವಿಚಾರ ನನಗೆ ಹೊಸದು, ಈ ಬಗ್ಗೆ, ನನಗೆ ಗೊತ್ತಿಲ್ಲ ಎಂದರು. ಇದನ್ನೂ ಓದಿ: ಶರಣಪ್ರಕಾಶ ಪಾಟೀಲರಿಗೆ ರಾಕಿ ಕಟ್ಟಿದ ಅಂಗನವಾಡಿ ಶಿಕ್ಷಕಿಯರು

ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ

ಬಿಜೆಪಿಯವರು ತಪ್ಪು ಮಾಡಿ ಸುಳ್ಳು ಹೇಳುತ್ತಿದ್ದಾರೆ. ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ಹದಿನಾರು ಸ್ಥಾನಗಳನ್ನು ಗೆಲ್ಲುವು ಎಂದು ಆಂತರಿಕ ಸಮೀಕ್ಷೆ ತಿಳಿಸಿತ್ತು ಆದರೆ ನಾವು ಗೆದ್ದದ್ದು 9 ಸ್ಥಾನಗಳನ್ನು  ಮಾತ್ರ. ರಾಹುಲ್ ಗಾಂಧಿ ಅವರು ಸಾಕ್ಷಿ ಸಮೇತ ವಿಚಾರಗಳನ್ನು ತಿಳಿಸಿದ್ದಾರೆ. ಈ ಎಲ್ಲವೂ ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗದ ಬಳಿ ಲಭ್ಯವಿದೆ. ದಾಖಲಾತಿಗಳ ಬಗ್ಗೆಯೇ ಪ್ರಸ್ತಾಪ ಮಾಡಿದ್ದಾರೆ. ಒಂದೇ ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.  ನಾವು ಈ ಬಗ್ಗೆ ಅಧ್ಯಯನ ಮಾಡಿದ ನಂತರ  ವಿಷಯ ತಿಳಿದಿದೆ ಎಂದರು.

ಇವಿಎಂಗಳಲ್ಲಿ,  ಮತದಾರರ ಪಟ್ಟಿಗಳಲ್ಲಿ, ಕೈವಾಡ ನಡೆಯುತ್ತಿದೆ ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ. ನನ್ನ ಪ್ರಕಾರ ರಾಹುಲ್ ಗಾಂಧಿಯವರು ಮಾಧ್ಯಮಗಳಲ್ಲಿ ಪ್ರದರ್ಶನ ಮಾಡಿದ್ದು ನಿಜ ಎಂದರು.

ಸತ್ತವರು ಮತ ಹಾಕಿದ್ದರೆ ಅದಕ್ಕೆ ಚುನಾವಣಾ ಆಯೋಗ ಹೊಣೆ

ಉಪ ಚುನಾವಣೆಯಲ್ಲಿ ಸತ್ತವರೆಲ್ಲಾ  ಮತ ಹಾಕಿ ಗೆಲ್ಲಿಸಿದ್ದಾರೆ ಎಂದು ಹಿಂದೆ ಮುಖ್ಯಮಂತ್ರಿಗಳು ಮಾಡಿದ್ದ ಭಾಷಣ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಒಂದು ವೇಳೆ  ಸತ್ತವರು  ಮತ ಹಾಕಿದ್ದರೆ ಅದಕ್ಕೆ ಯಾರು ಜವಾಬ್ದಾರರು? ಚುನಾವಣಾ ಆಯೋಗ ಇದಕ್ಕೆ ನೇರ ಹೊಣೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಶರಣಪ್ರಕಾಶ ಪಾಟೀಲರಿಗೆ ರಾಕಿ ಕಟ್ಟಿದ ಅಂಗನವಾಡಿ ಶಿಕ್ಷಕಿಯರು
Next: ಪ್ರಧಾನಿ ಬರಮಾಡಿಕೊಂಡ ಸಿಎಂ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.