ದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಮತಗಳ್ಳತನ ಮಾಡಿದೆ ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಆಗಸ್ಟ್ 8ರಂದು ಬೆಂಗಳೂರಿ ನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಕೈಗೊಂಡಿದ್ದರು.
ಅದರಂತೆ ಇಂದು (ಸೋಮವಾರ ಆ.11) ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಮತಗಳ್ಳತನದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಕೈಗೊಂಡಿದ್ದ ಸಂದರ್ಭದಲ್ಲಿ ರಾಹುಲ್ ಗಾಂಧಿ ಸೇರಿದಂತೆ 30 ಸಂಸದರು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿದ್ದರು. ದೆಹಲಿ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ.
ಸಂಸತ್ತಿನ ಕಟ್ಟಡದ ಹೊರಗೆ ರಾಜಕಾರಣಿಗಳು ಮತ್ತು ಪಕ್ಷದ ಕಾರ್ಯಕರ್ತರು ಜಮಾಯಿಸಿದ್ದರು. ಹಲವರು ರಸ್ತೆಗಳಲ್ಲಿ ಕುಳಿತಿದ್ದರು. ಧ್ವಜಗಳು ಮತ್ತು ಬ್ಯಾನರ್‌ಗಳನ್ನು ಹಿಡಿದು ಘೋಷಣೆ ಕೂಗುತ್ತಾ ಬ್ಯಾರಿಕೇಡ್ ತಳ್ಳಲು ಮುಂದಾದರು. ಇದನ್ನೂ ಓದಿ: ಸರ್ಕಾರದ ಹುಳುಕು ಮುಚ್ಚಿ ಹಾಕಲು ಪೊಲೀಸರ ಮೇಲೆ ಕ್ರಮ: ಬಿವೈವಿ
ಸಂಸತ್ ಭವನದ ಹೊರಗೆ ಭಾರಿ ಭದ್ರತೆ ಕಲ್ಪಿಸಲಾಗಿತ್ತು. ಪ್ರತಿಭಟನೆಗೆ ಅನುಮತಿ ಪಡೆಯದ ಹಿನ್ನೆಲೆ ಎಲ್ಲರನ್ನೂ ವಶಕ್ಕೆ ಪಡೆಯಲಾಯಿತು. ನಾಲ್ಕೈದು ಬಸ್‌ಗಳನ್ನು ನಿಯೋಜಿಸಿ, ಬ್ಯಾರಿಕೇಡ್ ಹಾಕಿ ಪೊಲೀಸರು ತಡೆಹಾಕಿದ್ದರು.
