ಬೆಂಗಳೂರು: ತತ್ವಜ್ಞಾನಿ, ಕಲಿಯುಗದ ಕಲ್ಪವೃಕ್ಷ, ಪೂಜ್ಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 354 ನೇ ಆರಾಧನಾ ಮಹೋತ್ಸವದ ಅಂಗವಾಗಿ ಇಂದು (ಮಂಗಳವಾರ ಆಗಸ್ಟ್ 12) ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶ್ರೀ ಗುರು ರಾಯರ ಸನ್ನಿಧಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ದರ್ಶನ ಪಡೆದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಖಜಾಂಚಿಗಳಾದ ಶ್ರೀ ಸುಬ್ಬಣ್ಣ, ರಾಜ್ಯ ಕಾರ್ಯದರ್ಶಿ ಶ್ರೀ ಶಲಣು ತಳ್ಳೀಕೆರೆ, ಜಿಲ್ಲಾಧ್ಯಕ್ಷರಾದ ಶ್ರೀ ಎಸ್.ಹರೀಶ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ಕೆ ಎನ್ ರಾಜಣ್ಣ ಸಚಿವ ಸ್ಥಾನದಿಂದ ವಜಾ, ಗೃಹ ಸಚಿವರು ಹೇಳಿದ್ದೇನು?
