ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪ್ರತಿಕ್ರಿಯಿಸಿದ್ದಾರೆ. ನಾವು ಮುಂದಿನ ಭಾನುವಾರ ಅಂದರೆ 17 ತಾರೀಖಿನಂದು ಬಿಜೆಪಿಯ ಹಿರಿಯ ಶಾಸಕರು ಸೇರಿದಂತೆ ನಾನೂ ಕೂಡ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಮಾಡಲಿದ್ದೇನೆ ಎಂದು ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಅನ್ನೋದಕ್ಕಿಂತ ಹೆಚ್ಚಾಗಿ, ನಾವು ಧರ್ಮಸ್ಥಳ ಮಂಜುನಾಥೇಶ್ವರ ಭಕ್ತರಾಗಿ ನಾವು ಅಲ್ಲಿಗೆ ಹೋಗ್ತಿದ್ದೇವೆ. ನಮ್ಮ ನಿಲುವು ಸ್ಪಷ್ಟವಾಗಿದೆ. ಇದನ್ನೂ ಓದಿ: ರೈತರ ಜಮೀನುಗಳನ್ನು ಸರ್ಕಾರ ಬಲವಂತವಾಗಿ ಕಸಿದುಕೊಂಡಿದೆ..!
ಎಸ್ಐಟಿ ತನಿಖೆ ಶೀಘ್ರದಲ್ಲಿ ಮುಗಿಬೇಕೆಂದು ನಾವು ಕೇಳಿಕೊಳ್ಳುತ್ತೇವೆ. ಇದನ್ನು ಹೀಗೆ ಎಳೆದುಕೊಂಡು ಹೋದರೆ ಸರಿ ಇರೋದಿಲ್ಲ. ಸತ್ಯ ಸತ್ಯತೆ ಬಹಿರಂಗವಾಗಬೇಕು. ಗೊಂದಲಗಳಿಗೆ ಶೀಘ್ರದಲ್ಲೇ ತೆರೆ ಬೀಳಬೇಕು ಎಂದರು. ಈ ತನಿಖೆ ಹಿಂದೆ ಕೆಲವು ಸಮಾಜಘಾತಕ ಶಕ್ತಿಗಳು ಹಾಗೂ ಬೇರೆ ಬೇರೆ ಕುತಂತ್ರಗಳು ನಡೆಯುತ್ತಿವೆ ಎಂದು ಜನಸಾಮಾನ್ಯರು ಮಾತನಾಡುತ್ತಿದ್ದಾರೆ ಎಂದರು.
