Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗವಿಸಿದ್ದಪ್ಪ ಹತ್ಯೆ ಪ್ರಕರಣ ಎನ್‍ಐಎಗೆ ವಹಿಸಿ: ಬಿವೈವಿ
  • Bangalore
  • Politics
  • State

ಗವಿಸಿದ್ದಪ್ಪ ಹತ್ಯೆ ಪ್ರಕರಣ ಎನ್‍ಐಎಗೆ ವಹಿಸಿ: ಬಿವೈವಿ

admin August 13, 2025 1 minute read
WhatsApp Image 2025-08-13 at 16.09.23
Spread the love

ಬೆಂಗಳೂರು: ಕೊಪ್ಪಳದ ಗವಿಸಿದ್ದಪ್ಪ ನಾಯಕರ ಕೊಲೆ ಪ್ರಕರಣವನ್ನು ಎನ್.ಐ.ಎಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ಮುಸ್ಲಿಂ ಮತಾಂಧರಿಂದ ಹತ್ಯೆಯಾದ ಕೊಪ್ಪಳದ ಗವಿಸಿದ್ದಪ್ಪ ನಾಯಕ ಅವರ ಪ್ರಕರಣವನ್ನು ಎನ್‍ಐಎ ತನಿಖೆಗೆ ವಹಿಸಬೇಕೆಂದು ಬಿಜೆಪಿ-ಜೆಡಿಎಸ್ ನಿಯೋಗವು ಇಂದು (ಬುಧವಾರ ಆ. 13) ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ ಅವರು, ಕಾನೂನಿನಡಿ ಈ ಬಡ ಕುಟುಂಬಕ್ಕೆ ಕನಿಷ್ಠ 50 ಲಕ್ಷ ರೂ. ಪರಿಹಾರ ನೀಡಬೇಕು. 2 ಎಕರೆ ಜಮೀನು ನೀಡಬೇಕು, ಕುಟುಂಬದ ಸದಸ್ಯರಿಗೆ ಸರಕಾರಿ ನೌಕರಿ ಕೊಡಬೇಕು ಎಂದು ಆಗ್ರಹಿಸಿದರು.

ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದೇನೆ. ಮಾಜಿ ಸಚಿವ ಶ್ರೀರಾಮುಲು, ರಾಜು ಗೌಡ, ಶಿವನಗೌಡ ನಾಯಕ, ಜನಾರ್ದನ ರೆಡ್ಡಿ ಅವರು ಸಂತ್ರಸ್ತನ ಕುಟುಂಬದವರನ್ನು ಭೇಟಿ ಮಾಡಿದ್ದಾರೆ ಎಂದರು. ಇಂಥ ಕೊಲೆಗಡುಕರಿಗೆ ಈ ಕಾಂಗ್ರೆಸ್ ಸರಕಾರದ ಬಗ್ಗೆ ವಿಪರೀತ ವಿಶ್ವಾಸ ಇದೆ. ಇದರಿಂದ ಮಂಗಳೂರು ಸೇರಿ ವಿವಿಧೆಡೆ ಸರಣಿ ಕೊಲೆಗಳು ನಡೆಯುತ್ತಿವೆ ಎಂದು ಟೀಕಿಸಿದರು. ಇದನ್ನೂ ಓದಿ: ಮನೆ ಮನೆಯಲ್ಲೂ ತ್ರಿವರ್ಣ ಧ್ವಜ: ವಿಜಯೇಂದ್ರ

ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಸರಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದ್ದೇವೆ ಎಂದರು. ಮೃತರು ಬಿಜೆಪಿ ಇರಲಿ, ಕಾಂಗ್ರೆಸ್ ಅಥವಾ ಜೆಡಿಎಸ್ ಕಾರ್ಯಕರ್ತನೇ ಇರಲಿ; ಬೇರೆ ಪಕ್ಷದಲ್ಲಿ ಹಿಂದೂ ಕಾರ್ಯಕರ್ತ ಇರಬಾರದು ಎಂದೇನಿಲ್ಲ. ಇದು ಬಹಳ ಗಂಭೀರವಾದ ವಿಚಾರ. ಇಡೀ ರಾಜ್ಯದಲ್ಲಿ ಮಾತ್ರವಲ್ಲದೇ ದೇಶದಲ್ಲೇ ಸುದ್ದಿಯಾಗಿದೆ. ಇದಕ್ಕಾಗಿ ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಡ ಹೇರುವುದಾಗಿ ತಿಳಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ವಿದೇಶದಲ್ಲಿ ಅಧ್ಯಯನಕ್ಕೆ ಸರ್ಕಾರದಿಂದ ವಿಶೇಷ ಕಾರ್ಯಕ್ರಮ
Next: ಹಿಂದುಳಿದ ವರ್ಗಗಳ ಪತ್ರಕರ್ತರಿಗೆ ಮೀಡಿಯಾ ಕಿಟ್ ಗೆ ಅರ್ಜಿ ಆಹ್ವಾನ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.