ಬೆಂಗಳೂರು: ರೇಣುಕಾ ಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇವಿದಂತೆ ಏಳು ಜನ ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನನ್ನು ಪ್ರಶ್ನಿಸಿ ಕರ್ನಾಟಕ ಪೊಲೀಸ್ರು ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಕರ್ನಾಟಕ ಪೊಲೀಸ್ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿ ಇಂದು (ಆಗಸ್ಟ್ 14) ರಂದು ಸುಪ್ರೀಂ ಕೋರ್ಟ್ ತೀರ್ಪನ್ನು ಇಂದಿಗೆ ಕಾದಿರಿಸಿತ್ತು.
ಇಂದು ಸುಪ್ರೀಂ ಕೋರ್ಟ್ ಆದೇಶ ಹೊರಬೀಳಲಿದ್ದು ಪವಿತ್ರ ಗೌಡ ದರ್ಶನ್ ಸೇರಿದಂತೆ ಏಳು ಆರೋಪಿಗಳ ಎದೆಯಲ್ಲಿ ಢವಢವ ಶುರುವಾಗಿದೆ.
ಇನ್ನು ಈ ಹಿಂದೆ ಸುಪ್ರೀಂ ಕೋರ್ಟ್ನಲ್ಲಿ ನಡೆದ ವಾದ-ಪ್ರತಿವಾದದ ಸಂದರ್ಭದಲ್ಲಿ ದರ್ಶನ್ ಹಾಗೂ ಪವಿತ್ರಾ ಪರ ವಕೀಲರು ಸುಪ್ರೀಂ ಕೋರ್ಟ್ಗೆ ಜಾಮೀನು ಮುಂದುವರೆಸುವಂತೆ ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ರೇಣುಕಾ ಸ್ವಾಮಿ ಕೇಸ್ ಸೆಪ್ಟೆಂಬರ್ಗೆ ಮುಂದೂಡಿಕೆ
ಹಾಗಾದ್ರೆ ಸುಪ್ರೀಂ ಕೋರ್ಟ್ ಹೈಕೋರ್ಟ್ ನೀಡಿರುವ ಜಾಮೀನು ಅರ್ಜಿಯನ್ನು ರದ್ದುಪಡಿಸಿ ಮತ್ತೆ ದರ್ಶನ್, ಪವಿತ್ರ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಜೈಲಿಗೆ ಕಳಿಸುತ್ತಾರೆ ಎಂಬುದೇ ಕುತೂಹಲದ ಸಂಗತಿಯಾಗಿದೆ.
