ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಕೋರಿರುವ ಬೆನ್ನಲ್ಲೇ ನಟಿ ಪವಿತ್ರ ಗೌಡ ಅವರು ಪೊಲೀಸರ ಅತಿಥಿಯಾಗಿದ್ದಾರೆ.
ಇನ್ನು ಬಂಧನಕ್ಕೆ ಒಳಪಡುವ ಮುನ್ನ ದೇವರ ಮೊರೆ ಹೋಗಿರುವ ಪವಿತ್ರ ಗೌಡ ಅವರು ಮನೆಯಲ್ಲಿರುವ ತುಳಸಿ ಗಿಡಕ್ಕೆ ಪೂಜೆ ಸಲ್ಲಿಸಿದ್ದಾರೆ. ತುಳಸಿ ಗಿಡಕ್ಕೆ ಪೂಜೆ ಸಲ್ಲಿಸಿರುವ ಫೋಟೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು ವಿಧ ವಿಧ ಕಾಮೆಂಟ್ಸ್ ಗಳನ್ನು ಹಾಕುತ್ತಿದ್ದಾರೆ. ಇದನ್ನೂಓದಿ: ಪವಿತ್ರ ಗೌಡ ಅರೆಸ್ಟ್
ಇನ್ನು ತೀರ್ಪು ಹೊರಬರುತ್ತಿದ್ದಂತೆ ಮನೆಯಲ್ಲಿ ಪವಿತ್ರಾ ಗೌಡ ತಾಯಿ ಎದುರು ಬಿಕ್ಕಳಿಸಿ ಅತ್ತಿದ್ದಾರೆ. ಈ ವೇಳೆ ಮನೆ ಬಳಿ ಪೊಲೀಸರು ಬಂಧನಕ್ಕೆ ಕಾದು ನಿಂತಿದ್ದರು. ಮನೆಯ ಬಾಗಿಲು ತೆರೆದಂತೆ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
