ಬೆಂಗಳೂರು: 79ನೇ ಸ್ವಾತಂತ್ರ್ಯೋತ್ಸ ದಿನಾಚರಣೆಯನ್ನು ಇಂದು ದೇಶದಾದ್ಯಂತ ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ ಆಗಸ್ಟ್ 15) 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ನಂತರ ಅವರು ತೆರೆದ ಜೀಪ್ನಲ್ಲಿಯೇ ಪರೇಡ್ ವೀಕ್ಷಣೆ ನಡೆಸಿ, ಗೌರವ ವಂದನೆ ಸ್ವೀಕರಿಸಿದರು. ಇದನ್ನೂ ಓದಿ: ಕಾಂಗ್ರೆಸ್ ನ ಸೆಪ್ಟೆಂಬರ್ ಕ್ರಾಂತಿ ಆಗಲ್ಲಾ ಅದು ವಾಂತಿ ಆಗುತ್ತೆ: ಸುಧಾಕರ್
ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿದ ಬಳಿಕ, ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಉದ್ದೇಶಿಸಿ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ರಾಜ್ಯ ಸಚಿವ ಮಂಡಳಿ ಸದಸ್ಯರು, ಶಾಸಕರು, ಹಿರಿಯ ಅಧಿಕಾರಿಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರು ಭಾಗವಹಿಸಿದ್ದರು.
