ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಏಳು ಜನ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿರುವುದರಿಂದ ನಟ ದರ್ಶನ್ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ಪರಪ್ಪನ ಅಗ್ರಹಾರ ಜೇಲಿನಲ್ಲಿ ಕಳೆದ ಬಾರಿ ಜೈಲು ಅಧಿಕಾರಿಗಳು ದರ್ಶನ್ ಹಾಗೂ ಇನ್ನಿತರಿಗೆ ಸಕಲ ಸೌಲಭ್ಯವನ್ನು ಒದಗಿಸಿ ಕೊಟ್ಟಿದ್ದ ಕಾರಣಕ್ಕೆ ನಟ ದರ್ಶನ್ ಅವರನ್ನು ಬಳ್ಳಾರಿನ ಸೆಂಟ್ರಲ್ ಜೈಲಿಗೆ ಕಳಿಸಲಾಗಿತ್ತು. ಮತ್ತೆ ಇದೀಗ ಬಳ್ಳಾರಿ ಜಿಲ್ಲೆಗೆ ದರ್ಶನ್ ಹೋಗುತ್ತಾರೆ ಎಂದು ಎಲ್ಲರಲ್ಲೂ ಪ್ರಶ್ನೆ ಮೂಡಿದೆ.
ಹೌದು, ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಜೈಲಾಧಿಕಾರಿಗಳು ಮನವಿ ಮಾಡಲಿದ್ದಾರೆ. ಕೋರ್ಟ್ ಗೆ ಜೈಲಾಧಿಕಾರಿಗಳು ಅರ್ಜಿ ಸಲ್ಲಿಸಲಿದ್ದಾರೆ. ಎಸ್ಪಿಪಿ ಮೂಲಕ ಕೋರ್ಟ್ ಗೆ ಮನವಿ ಸಲ್ಲಿಸಲಿದ್ದಾರೆ. ಎಸ್ಪಿಪಿ ಪ್ರಸನ್ನ ಕುಮಾರ್ ಅವರ ಮೂಲಕ ಅರ್ಜಿ ಸಲ್ಲಿಕೆ ಮಾಡಲಾಗುತ್ತದೆ. ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ರೂ. 880 ಕೋಟಿ ಅನುದಾನ ಬಿಡುಗಡೆಯಾಗಿಲ್ಲ: ಸಿಎಂ
ಕಳೆದ ಬಾರಿ ಜೈಲು ಸೇರಿದ್ದಾಗ ಕೆಲ ರೌಡಿಗಳ ಜೊತೆ ದರ್ಶನ್ ಸಂಪರ್ಕ ಬೆಳಸಿದ್ದ. Bನಟೋರಿಯಸ್ ವಿಲ್ಸನ್ ಗಾರ್ಡನ್ ನಾಗನ ಜೊತೆ ಗುರುತಿಸಿಕೊಂಡಿದ್ದ. ಅಲ್ಲದೇ ಐಷಾರಾಮಿ ಸ್ಪೆಷಾಲಿಟಿ ಪಡೆದಿದ್ದ. ಈ ಬಾರಿಯೂ ಮತ್ತೆ ಅದೇ ರೀತಿ ಮುಂದಾಗುವ ಸಾಧ್ಯತೆ ಇದೆ. ದರ್ಶನ್ ಗೆ ಈಗಾಗಲೇ ಅಪರಾಧ ಹಿನ್ನೆಲೆ ಇದೆ. ರೌಡಿಶೀಟರ್ ಗಳ ಸಂಪರ್ಕ ಸಾಧಿಸುವ ಸಾಧ್ಯತೆ. ಹೀಗಾಗಿ ಬಳ್ಳಾರಿಗೆ ಶಿಫ್ಟ್ ಮಾಡಲು ಕೋರ್ಟ್ ಗೆ ಅರ್ಜಿ ಹಾಕಲು ಜೈಲಾಧಿಕಾರಿಗಳು ಮುಂದಾಗಿದ್ದಾರೆ.
