ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿರುವ ದಲಿತ ಮೂರು ವರ್ಗಗಳಾಗಿರುವ ಆದಿ ಕರ್ನಾಟಕ, ಆದಿ ದ್ರಾವಿಡ ಹಾಗೂ ಆದಿ ಆಂಧ್ರದ ವರ್ಗದ ಜನಾಂಗಕ್ಕೆ ಸಿಹಿ ಸುದ್ದಿಯನ್ನು ನೀಡಿದ್ದು, ದಶಕಗಳ ಬೇಡಿಕೆಗೆ ಐತಿಹಾಸಿಕ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಂಡಿದ್ದಾರೆ.
ಹೌದು, ನ್ಯಾ. ನಾಗಮೋಹನ್ ದಾಸ್ ಆಯೋಗ ನೀಡಿದ ಶಿಫಾರಸಿನಂತೆ ಪರಿಶಿಷ್ಟ ಜಾತಿಗೆ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಒಳಮೀಸಲಾತಿ ಜಾರಿಗೆ ಅನುಕೂಲವಾಗುವಂತೆ, ಕರ್ನಾಟಕದಲ್ಲಿರುವ ದಲಿತರನ್ನು ಮೂರು ವರ್ಗಗಳಾಗಿ ವಿಂಗಡಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಪತ್ರಕರ್ತ ಸಮುದಾಯದ ನೆರಳಲ್ಲೇ ಅರಳಿದವನು ನಾನು: ಕೆವಿಪಿ
ಅವರನ್ನು ಆದಿ ಕರ್ನಾಟಕ, ಆದಿ ದ್ರಾವಿಡ ಹಾಗೂ ಆದಿ ಆಂಧ್ರ ಎಂದು ವರ್ಗೀಕರಿಸಲು ತೀರ್ಮಾನಿಸಲಾಗಿದೆ. ಎಡಗೈ ಸಮುದಾಯಕ್ಕೆ ಹಾಗೂ ಬಲಗೈ ಸಮುದಾಯಕ್ಕೆ ಶೇ. 6ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ. ಇನ್ನು ಸ್ಪರ್ಶ್ಯ ಸಮುದಾಯಗಳಿಗೆ ಶೇ. 5ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ.
