ದೆಹಲಿ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು (ಗುರುವಾರ ಆಗಸ್ಟ್ 21) ರಂದು ಕೇಂದ್ರದ ಭೂಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಹಾಲಿ ನಡೆಯುತ್ತಿರುವ ಹಾಗೂ ಮುಂಬರುವ ದಿನಗಳಲ್ಲಿ ಕೈಗೊಳ್ಳಲಾಗುವ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚಿ ನಡೆಸಿದ್ದಾರೆ.
ನಿತಿನ್ ಗಡ್ಕರ್ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ರಾಜ್ಯದ ವಿವಿಧ ಯೋಜಗಳ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಯೂಟ್ಯೂಬರ್ ಸಮೀರ್ ಗೆ ಬಂಧನದ ಭೀತಿ
ಹೌದು, ಗಡ್ಕರಿ ಅವರ ನಿವಾಸಕ್ಕೆ ತಮ್ಮ ಆಪ್ತ ಅಧಿಕಾರಿಗಳ ಜತೆ ತೆರಳಿ ಭೇಟಿ ಮಾಡಿದ ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದ್ದಾರೆ. ಬಹುತೇಕ ಯೋಜನೆಗಳಿಗೆ ಹೆದ್ದಾರಿ ಸಚಿವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಸಚಿವರು ಹೆದ್ದಾರಿ ಸಚಿವರೊಂದಿಗೆ ಚರ್ಚಿಸಿದರು.
