ಮಂಗಳೂರು: ಧರ್ಮಸ್ಥಳ ಬುರುಡೆ ಕೇಸ್ ಗೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ ಈಗಾಗಲೇ ಪೊಲೀಸರ ವಶದಲ್ಲಿದ್ದಾರೆ. ಅಲ್ಲದೆ ತಿಮರೋಡಿ ಮನೆ ಮೇಲೆ ಇಂದು (ಮಂಗಳವಾರ ಆ. 26) ಎಸ್ಐಟಿ ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದಾರೆ.
ಇನ್ನು ಮಾಸ್ಕ್ ಮ್ಯಾನ್ ಚಿನ್ನಯ ಅವರು ವಿಚಾರಣೆ ವೇಳೆ ಸ್ಪೋಟಕ ಮಾಹಿತಿಯನ್ನು ಹೊರ ಹಾಕಿದ್ದಾರೆ. ಎಸ್ಐಟಿ ಉತ್ಕನನ ನಡೆಸಿದ ಬಳಿಕ ತಾನು ತಿಮರೋಡಿಯ ನಿವಾಸಕ್ಕೆ ಹೋಗುತ್ತಿದ್ದೆ. ಅಲ್ಲಿ ನನಗೆ ಒಂದು ಕೊಠಡಿಯನ್ನು ನೀಡಲಾಗಿತ್ತು. ಅಲ್ಲಿ ನಾನು ಬಟ್ಟೆ, ಬ್ಯಾಗ್ ಇಟ್ಟಿದ್ದೇನೆ. ನಾನು ಮೊಬೈಲ್ ಬಳಸುತ್ತಿರಲಿಲ್ಲ. ನನ್ನ ಮೊಬೈಲ್ ತಿಮರೋಡಿ ಕಡೆಯವರ ಜೊತೆ ಇತ್ತು ಎಂದು ಹೇಳಿದ್ದ. ಈ ಕಾರಣಕ್ಕೆ ಚಿನ್ನಯ್ಯ ತಂಗಿದ್ದ ಕೊಠಡಿಯ ಮಹಜರು ಮತ್ತು ಮೊಬೈಲ್ ಸಂಗ್ರಹಿಸಲು ಪೊಲೀಸರು ತಿಮರೋಡಿ ನಿವಾಸಕ್ಕೆ ಆಗಮಿಸಿದ್ದಾರೆ. ಇದನ್ನೂ ಓದಿ: ರಾತ್ರೋರಾತ್ರಿ ಸಿಟಿ ರೌಂಡ್ ಹಾಕಿದ ಡಿಸಿಎಂ ಡಿಕೆಶಿ
ಧರ್ಮಸ್ಥಳದಲ್ಲಿ ಉತ್ಕನನ ನಡೆಯುತ್ತಿದ್ದಾಗ ಬುರುಡೆ ಗ್ಯಾಂಗ್ನ ಎಲ್ಲಾ ಸದಸ್ಯರು ತಿಮರೋಡಿ ಮನೆಯಲ್ಲೇ ತಂಗಿದ್ದರು. ಎಲ್ಲಾ ಪ್ಲ್ಯಾನ್ಗಳು ಇಲ್ಲೇ ಸಿದ್ಧವಾಗುತ್ತಿತ್ತು ಎಂದು ಮಾಸ್ಕ್ ಮ್ಯಾನ್ ಚಿನ್ನಯ ಹೇಳಿದ್ದಾರೆ.
