ಬೆಂಗಳೂರು: ಮಳೆಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆರ್ ಎಸ್ ಎಸ್ ನ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ್ದಾರೆ.
ನಾನು ಹುಟ್ಟುಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ. ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆ ಹಾಡಿರುವ ವಿಷಯವನ್ನು ರಾಜಕೀಯ ಮಾಡುವುದು ಬೇಡ. ನನಗೂ ವಿರೋಧ ಪಕ್ಷದ ಸಿದ್ಧಾಂತದ ಬಗ್ಗೆ ಅರಿವಿದೆ ಎಂಬುದನ್ನು ಪ್ರಸ್ತಾಪಿಸಿದೆ ಹೊರತು ನಾನು ಆರ್ಸ್ಎಸ್ ಅನ್ನು ಹೊಗಳಲು ಹೇಳಿಲ್ಲ. ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ. ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು. ಯಾರಿಗೇ ಆಗಲಿ ನನ್ನಿಂದ ನೋವಾಗಿದ್ದರೆ ಕ್ಷಮೆ ಕೇಳಲು ಸಿದ್ಧ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಕ್ಷಮೆ ಕೇಳಿದ್ದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಜೆಡಿಎಸ್ ಪಕ್ಷ ಲೇಬಡಿ ಮಾಡಿದೆ. ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆ ಕೇಳಿದ್ಯಾಕೆ?
ಜೆಡಿಎಸ್ ಪಕ್ಷದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್. ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ. ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆ ಹಾಡಿ ಇಟಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ.
ನಾಯಕ ಸಮುದಾಯದ ಸಚಿವರನ್ನು ಏಕಾಏಕಿ ಮಂತ್ರಿಸ್ಥಾನದಿಂದ ವಜಾಗೊಳಿಸಲಾಗಿತ್ತು. ಅವರಿಗೆ ಕ್ಷಮೆಕೇಳುವ ಒಂದು ಅವಕಾಶವನ್ನು ಸಹ ಹೈಕಮಾಂಡ್ ನೀಡಿರಲಿಲ್ಲ. ಕಾಂಗ್ರೆಸ್ (Congress) ಹೈಕಮಾಂಡ್ನಲ್ಲಿ ದಲಿತರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯ ಎಂದು ಟೀಕಿಸಿದೆ.
