Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದೇವರಿಗೆ ಧರ್ಮವಿಲ್ಲ, ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ: ಡಿಸಿಎಂ ಡಿಕೆಶಿ
  • Bangalore
  • Front news
  • Politics
  • State

ದೇವರಿಗೆ ಧರ್ಮವಿಲ್ಲ, ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ: ಡಿಸಿಎಂ ಡಿಕೆಶಿ

admin August 27, 2025 1 minute read
WhatsApp Image 2025-08-27 at 15.53.38
Spread the love

ಬೆಂಗಳೂರು: ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು.‌ ರಾಜ ವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ. ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ‌ ಮಾಡುವ ಅಗತ್ಯವಿಲ್ಲ ಎಂದರು.

ಎಲ್ಲಿದೆ ನಿಯಮ ತೋರಿಸಿ?

ನಾಡದೇವಿಯ ದೇವಸ್ಥಾನಕ್ಕೆ ಕೇವಲ ಹಿಂದುಗಳು‌ ಮಾತ್ರ ಬರಬೇಕು ಎನ್ನುವ ನಿಯಮವಿದೆಯೇ? ಒಂದಷ್ಟು ಸಮುದಾಯದವರು ಬೌದ್ಧ, ಕ್ರಿಶ್ಚಿಯನ್, ಇಸ್ಲಾಂ ಧರ್ಮಕ್ಕೆ ಸೇರಿಕೊಂಡಿದ್ದಾರೆ. ಇವರನ್ನು ದೇವಾಲಯಕ್ಕೆ ಬರಬೇಡಿ ಎಂದು ಹೇಳಲು ಆಗುತ್ತದೆಯೇ? ತಂದೆ-ತಾಯಿ ಬೇರೆ, ಬೇರೆ ಧರ್ಮಕ್ಕೆ ಸೇರಿರುತ್ತಾರೆ. ಇಂತಹ ಮಕ್ಕಳ ಆಚರಣೆ ಬೇರೆ,‌‌ ಬೇರೆ ಇರುತ್ತದೆ. ಬ್ಯಾರಿಗಳು ನಮಗಿಂತ ಅದ್ಭುತವಾಗಿ ಕನ್ನಡ ಮಾತನಾಡುತ್ತಾರೆ. ಅವರನ್ನು ಮುಸ್ಲಿಮರು ಎಂದು ತಳ್ಳಿಬಿಡಲು ಆಗುತ್ತದೆಯೇ? ಮುಸ್ಲಿಮರು ಶ್ಲೋಕವೊಂದನ್ನು ಪಠಣ ಮಾಡುವ ವಿಡಿಯೋ ನೋಡಿದೆ. ಅವರು ಸಹ ನಮ್ಮ ಧರ್ಮದ ಬಗ್ಗೆ ತಿಳಿದುಕೊಂಡಿದ್ದಾರೆ ಎಂದರು.

ಮಹಾರಾಜರ ಆಳ್ವಿಕೆ ಕಾಲದಲ್ಲಿಯೂ ವಿದೇಶಗಳಿಂದ ಅತಿಥಿಗಳನ್ನು ದಸರಾಕ್ಕೆ ಆಹ್ವಾನ ಮಾಡುತ್ತಿದ್ದರು. ವಿದೇಶಿ ಧರ್ಮಿಯರೂ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಚರ್ಚ್,‌ ಮಸೀದಿ, ಜೈನ ಬಸದಿ, ಗುರುದ್ವಾರ ಹೀಗೆ ಎಲ್ಲಾ ಕಡೆ ನಮ್ಮನ್ನು ಒಳಗೆ ಬಿಡುವುದಿಲ್ಲವೇ. ಈ ಹಿಂದೆ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟನೆ ಮಾಡಿದರು. ಆದರೆ ಈಗ ಬಾನು ಮುಷ್ತಾಕ್ ಅವರು ಬೆಟ್ಟ ಹತ್ತಬಾರದು,‌ ಉದ್ಘಾಟನೆ ಮಾಡಬಾರದು ಎನ್ನುವುದು ಎಷ್ಟು ಸರಿ? ಎಂದು ಹೇಳಿದರು. ಇದನ್ನೂ ಓದಿ: ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು: ಡಿಕೆಶಿ

ಸಂಸದ ಯದುವೀರ್ ಅವರು ಈಗ ಬಿಜೆಪಿ ಜೊತೆ ಸೇರಿಕೊಂಡು ಬಿಟ್ಟಿದ್ದಾರಲ್ಲ, ಆದ ಕಾರಣಕ್ಕೆ ಇತಿಹಾಸ ಮರೆತು ಬಿಟ್ಟಿದ್ದಾರೆ. ನಾನೊಬ್ಬ ಹಿಂದೂ. ಆ ಚಾಮುಂಡಿ ತಾಯಿಗೆ 2 ಸಾವಿರ ಕಾಣಿಕೆ ನೀಡಿ ನಾನು ಹಾಗೂ ಸಿದ್ದರಾಮಯ್ಯ ಅವರು ಈ 2 ಸಾವಿರವನ್ನು ಎಲ್ಲಾ ತಾಯಂದಿರಿಗೂ ಕೊಡುವ ಶಕ್ತಿ ನೀಡುವಂತೆ ಪ್ರಾರ್ಥನೆ ಸಲ್ಲಿಸಿದೆವು. ಆ ತಾಯಿ ನಮಗೆ ಆಶೀರ್ವಾದ ಮಾಡಿದ್ದಾಳೆ.‌ ಈಗ ಕೇವಲ ಹಿಂದೂಗಳಿಗೆ ಮಾತ್ರ ಹಣ ನೀಡುತ್ತಾ ಇದ್ದೇವಾ? ಪಾರ್ಸಿ, ಸಿಖ್, ಮುಸ್ಲಿಂ, ಜೈನ, ಬೌದ್ಧರಿಗೆ ಹಣ ನೀಡುತ್ತಿಲ್ಲವೇ? ಎಂದರು.

ನಾವು ಆಚರಣೆ ಮಾಡುವಷ್ಟು ಹಿಂದೂ ಪದ್ಧತಿಯನ್ನು ಅವರೆಲ್ಲಿ (ಬಿಜೆಪಿ) ಆಚರಣೆ ಮಾಡುತ್ತಾರೆ. ನಾನೇನು ಯಾರ ವಿರುದ್ಧವೂ ಇಲ್ಲ, ಯಾರನ್ನೂ ಓಲೈಕೆ ಮಾಡುತ್ತಿಲ್ಲ. ಎಲ್ಲರಿಗೂ ಅವಕಾಶ ಸಿಗಬೇಕು. ಯಾವ ಹಿಂದೂ ದೇವಸ್ಥಾನದಲ್ಲಿ ಬೇರೆ ಧರ್ಮದವರು ಬರಬಾರದು ಎಂದು ಹೇಳಿರುವ ಉದಾಹರಣೆ ಇದ್ದರೆ ತೋರಿಸಿ ಎಂದರು.

ಬಿಜೆಪಿ ರಾಜಕೀಯ ಅಜೆಂಡಾ

ಇದು ಬಿಜೆಪಿಯ ರಾಜಕೀಯ ಅಜೆಂಡಾ. ಇಂತಹ ಬಿಜೆಪಿ ಅಲ್ಪಸಂಖ್ಯಾತ ಇಲಾಖೆಯನ್ನು ಮುಚ್ಚಿಬಿಡಲಿ. ನಮ್ಮ ದೇಶದ ನಿವಾಸಿಗಳೆಲ್ಲರನ್ನು ನಾವು ಒಪ್ಪಿಕೊಳ್ಳಲೇ ಬೇಕು. ಅವರನ್ನು ದೇಶದಿಂದ ಓಡಿಸಿ ಬಿಡಲು ಆಗುತ್ತದೆಯೇ? ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಗೌರಿ, ಗಣೇಶ ಹಬ್ಬವು ಹಿಂದೂಗಳ ಸಾಂಪ್ರದಾಯಿಕ ಹಬ್ಬ:  ಶಾಸಕ ಸತೀಶ್ ರೆಡ್ಡಿ
Next: Breaking news: ಶಾಲೆಯಲ್ಲಿ ಗಂಡು ಮಗುವಿಗೆ ಜನ್ಮವಿತ್ತ 9ನೇ ತರಗತಿ ಬಾಲಕಿ..!

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.