Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೆ ಎನ್ ರಾಜಣ್ಣ ಬಿಜೆಪಿ ಸೇರ್ಪಡೆ ಆಗ್ತಾರಾ?
  • Bangalore
  • Politics
  • State

ಕೆ ಎನ್ ರಾಜಣ್ಣ ಬಿಜೆಪಿ ಸೇರ್ಪಡೆ ಆಗ್ತಾರಾ?

admin August 30, 2025 1 minute read
WhatsApp Image 2025-08-30 at 17.34.43
Spread the love

ಬೆಂಗಳೂರು: ಕಾಂಗ್ರೆಸ್ನ ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು ಮತ್ತೆ ಸಚಿವ ಸಂಪುಟಕ್ಕೆ ಮರಳಿ ಬರಲು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಹೌದು, ಸಹಕಾರ ಸಚಿವರಾಗಿದ್ದ ಕೆ ಎನ್ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಿರುವುದರಿಂದ ಮತ್ತೆ ಸಚಿವ ಸಂಪುಟ ಸೇರಲು ಮಾಜಿ ಸಚಿವ ಕೆಎನ್ ರಾಜಣ್ಣ ಅವರು ದೆಹಲಿಯಲ್ಲಿ ಕಸರತ್ತು ನಡೆಸಲು ಮುಂದಾಗಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ನಡೆದಿರುವ ವಿಷಯದ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದಾರೆ. ಒಂದು ವೇಳೆ ಸಚಿವ ಸಂಪುಟಕ್ಕೆ ಮರಳಿ ಕರೆದುಕೊಳ್ಳದಿದ್ದರೆ ಕೆಎನ್ ರಾಜಣ್ಣ ಅವರು ಬಿಜೆಪಿ ಪಕ್ಷ ಸೇರ್ತಾರಾ ಎಂದು ಕೆಲವಡೆ ಸುದ್ದಿ ಹರಿದಾಡುತ್ತಿದೆ.

ಇನ್ನು ರಾಜಣ್ಣ ಅವರ ಸಾವಿರಾರು ಬೆಂಬಲಿಗರು ಅಕ್ಟೋಬರ್‌ನಲ್ಲಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು, ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಒತ್ತಾಯಿಸಲಿದ್ದಾರೆ. ಇದನ್ನೂ ಓದಿ: ವಿಗ್ರಹಗಳನ್ನು ಸ್ಥಾಪಿಸಿ ವಿಚಾರಗಳನ್ನು ಕೊಲ್ಲುವ ಅಪಾಯದ ಬಗ್ಗೆ ಎಚ್ಚರ: ಕೆ.ವಿ.ಪಿ

ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುವ ಮೊದಲು ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಬೆಂಬಲ ಗಳಿಸುವ ರಾಜಣ್ಣ ಅವರ ಯೋಜನೆಯಾಗಿ ಈ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜಣ್ಣ ಅವರಿಗೆ ನ್ಯಾಯ ಸಿಗುವವರೆಗೆ ಹಿಂದುಳಿದ ವರ್ಗಗಳ ವೇದಿಕೆಯಡಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಬೆಂಬಲಿಗ, ತುಮಕೂರು ನಗರ ನಿಗಮದ ಮಾಜಿ ಸದಸ್ಯ ಧನಿಯಾ ಕುಮಾರ್ ತಿಳಿಸಿದ್ದಾರೆ. ಪ್ರತಿಭಟನಾಕಾರರು ದೆಹಲಿಗೆ ರೈಲು ಹತ್ತುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ರಾಜಣ್ಣ ಅವರ ಮುಂದೆ ಹಲವು ಆಯ್ಕೆಗಳಿವೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜಣ್ಣ ಅವರ ಬಗ್ಗೆ ಗಮನ ಹರಿಸದಿದ್ದರೆ ಬಿಜೆಪಿ ಸೇರುವ ಯೋಜನೆ ಹೊಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ವಿಗ್ರಹಗಳನ್ನು ಸ್ಥಾಪಿಸಿ ವಿಚಾರಗಳನ್ನು ಕೊಲ್ಲುವ ಅಪಾಯದ ಬಗ್ಗೆ ಎಚ್ಚರ: ಕೆ.ವಿ.ಪಿ
Next: ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಸಿಎಂ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.