Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಸಿಎಂ
  • Bangalore
  • Front news
  • Politics
  • State

ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಸಿಎಂ

admin August 31, 2025
WhatsApp Image 2025-08-31 at 4.22.37 PM
Spread the love

ಬೆಂಗಳೂರು: “ಮನುಷ್ಯ ಧರ್ಮವನ್ನು ಮೂಲವಾಗಿಟ್ಟುಕೊಂಡು ಮೈಸೂರು ಅರಸರು ಹಾಗೂ ಅವರ ವಂಶಸ್ಥರು ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕವನ್ನು ಕಟ್ಟಿದ ಇತಿಹಾಸ ಅರಸು ಸಮುದಾಯಕ್ಕಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಅರಸು ಅಸೋಸಿಯೇಷನ್ ನ ಸುವರ್ಣ ಮಹೋತ್ಸವದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಅರಸು ಸಮುದಾಯವು ಗಾತ್ರದಲ್ಲಿ ಚಿಕ್ಕದಿರಬಹುದು. ಆದರೆ ಈ ರಾಜ್ಯಕ್ಕೆ ಅವರು ನೀಡಿರುವ ಕೊಡುಗೆ ಬಹು ದೊಡ್ಡದು. ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪರಾಜಮ್ಮಣ್ಣಿ, ಜಯಚಾಮರಾಜೇಂದ್ರ ಒಡೆಯರ್ ಅವರು ಹೀಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕನ್ನಂಬಾಡಿ ಕಟ್ಟೆ, ವಾಣಿವಿಲಾಸ ಸಾಗರ ಅಣೆಕಟ್ಟು, ಜೆ.ಸಿ. ಎಂಜಿನಿಯರ್ ಕಾಲೇಜು, ವಿಕ್ಟೋರಿಯಾ ಆಸ್ಪತ್ರೆ ಹೀಗೆ ಹಲವಾರು ಜನೋಪಕಾರಿ ಕೆಲಸಗಳಿಗೆ ಅಡಿಪಾಯ ಹಾಕಿಕೊಟ್ಟವರು ಮೈಸೂರು ಅರಸರು” ಎಂದು ಕೊಂಡಾಡಿದರು.

“ವಿದ್ಯುತ್ ಉತ್ಪಾದನೆ ಸೇರಿದಂತೆ ರಾಜ್ಯದ ಪ್ರಮುಖ ಸಂಸ್ಥೆಗಳ ಸ್ಥಾಪನೆಗೆ ಅಡಿಪಾಯ ಹಾಕಿಕೊಟ್ಟವರು ಮೈಸೂರಿನ ಒಡೆಯರು. ಇವರು ನೆಟ್ಟಿರುವ ಮರದ ಫಲವನ್ನು ನಾವೆಲ್ಲರೂ ತಿನ್ನುತ್ತಿದ್ದೇವೆ” ಎಂದರು.

ಮೀಸಲಾತಿ ಹಾಗೂ ನಿವೇಶನ ನೀಡುವ ಬಗ್ಗೆ ಚರ್ಚೆ

“ಅರಸು ಸಮುದಾಯಕ್ಕೆ ಮೀಸಲಾತಿ ಸೇರಿದಂತೆ ಇತರೇ ಅನುಕೂಲಗಳನ್ನು ಕಲ್ಪಿಸಿಕೊಡಬೇಕು ಎಂದು ಮುಖಂಡರುಗಳು ಮನವಿ ಸಲ್ಲಿಸಿದ್ದಾರೆ. ಇದರ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು. ಸಂಘಕ್ಕೆ ನಿವೇಶನ ಬೇಕು ಎಂದು ಮನವಿ ಸಲ್ಲಿಸಿದ್ದೀರಿ. ನಾನು ಬೆಂಗಳೂರು ಅಭಿವೃದ್ಧಿಯ ಜವಾಬ್ದಾರಿ ಹೊತ್ತಿದ್ದೇನೆ‌. ಆದ ಕಾರಣ ಸಂಘದ ಪ್ರಮುಖರು ಹಾಗೂ ರಾಜ ವಂಶಸ್ಥರ ಜೊತೆಯಲ್ಲಿ ಚರ್ಚೆ ಮಾಡಿ ನಿಮ್ಮ ಬೇಡಿಕೆ ಈಡೇರಿಸುವ ಬಗ್ಗೆ ಕೆಲಸ ಮಾಡಲಾಗುವುದು” ಎಂದು ಭರವಸೆ ನೀಡಿದರು.

“ಮೈಸೂರು ಮಹಾರಾಜರು ಯಾವ ಧರ್ಮದಲ್ಲಿ ನಡೆಯಬೇಕು, ಯಾವ ಧರ್ಮವನ್ನ ಉಳಿಸಿಕೊಳ್ಳಬೇಕು ಎಂದು ಯಾವತ್ತೂ ಮಾತನಾಡಲಿಲ್ಲ. ಏಕೆಂದರೆ ಧರ್ಮ ಯಾವುದಾದರೂ ಇರಲಿ, ತತ್ವ, ನಾಮ ನೂರಾರೂ ಇದ್ದರೂ ದೈವವೊಂದೇ. ಪೂಜೆ ಹಲವಾದರೂ ಭಕ್ತಿಯೊಂದೇ, ದೇವನೊಬ್ಬ ನಾಮ ಹಲವು” ಎಂದರು.

About the Author

admin

Administrator

Visit Website View All Posts

Spread the love

Post navigation

Previous: ಕೆ ಎನ್ ರಾಜಣ್ಣ ಬಿಜೆಪಿ ಸೇರ್ಪಡೆ ಆಗ್ತಾರಾ?
Next: ಮಾಜಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜುಗೆ ಶಭ ಹಾರೈಸಿದ ಸಿಎಂ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.