Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • AIISH ಸಂಸ್ಥೆಗೆ ವರುಣಾ ಕ್ಷೇತ್ರದಲ್ಲಿ 10 ಎಕರೆ ಜಾಗ ಒದಗಿಸಿದ್ದೇವೆ: ಸಿಎಂ
  • Bangalore
  • Front news
  • Politics

AIISH ಸಂಸ್ಥೆಗೆ ವರುಣಾ ಕ್ಷೇತ್ರದಲ್ಲಿ 10 ಎಕರೆ ಜಾಗ ಒದಗಿಸಿದ್ದೇವೆ: ಸಿಎಂ

admin September 1, 2025 1 minute read
Spread the love

ಮೈಸೂರು: ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ“ವಜ್ರ ಮಹೋತ್ಸವ ಕಾರ್ಯಕ್ರಮ”ದಲ್ಲಿ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ‌ ಸರ್ಕಾರ ಈಗಾಗಲೇ 10 ಎಕರೆ ಜಾಗ ಒದಗಿಸಿದೆ. ಇಷ್ಟಲ್ಲದೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸಲು ನಾವು ಸಿದ್ದರಿದ್ದೇವೆ ಎಂದು ಭರವಸೆ ನೀಡಿದರು.

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯು (AIISH), ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿರುವ ಏಷ್ಯಾದ ಅತ್ಯುತ್ತಮ ಸಂಸ್ಥೆಗಳಲ್ಲೊಂದಾಗಿರುವುದು ನಮ್ಮ ಜಿಲ್ಲೆಯ ಮತ್ತು ರಾಜ್ಯದ ಹೆಮ್ಮೆ.

ಧ್ವನಿಯಿಲ್ಲದವರಿಗೆ ಧ್ವನಿಯಾಗಿರುವ, ಕಿವಿ ಕೇಳದೆ ಮೌನವಾಗಿರುವವರಿಗೆ ಮಾತಿನ ಚೈತನ್ಯ ತುಂಬಿರುವ ಇಂಥ ಸಂಸ್ಥೆಯು ಮೈಸೂರಿನಲ್ಲಿರುವುದು ಹಾಗೂ ವಜ್ರ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ ಎಂದರು.

ಮನುಷ್ಯರಿಗೆ ದೇಹದ ಎಲ್ಲಾ ಅಂಗಗಳು ಮುಖ್ಯವಾದರೂ ಕಣ್ಣು, ಕಿವಿಗಳು ಅತಿ ಮುಖ್ಯವಾದ ಅಂಗಗಳಾಗಿವೆ. ದೃಷ್ಟಿ ಮತ್ತು ಶಬ್ಧಗಳ ಗ್ರಹಿಕೆಯು ಮನುಷ್ಯರ ಮಾತುಗಳನ್ನು ರೂಪಿಸುತ್ತವೆ ಹಾಗೂ ನಿಯಂತ್ರಿಸುತ್ತವೆ. 2011 ರ ರಾಷ್ಟ್ರೀಯ ಜನಗಣತಿಯ ಪ್ರಕಾರ ರಾಜ್ಯದಲ್ಲಿ 3.3 ಲಕ್ಷ ಜನರು ಮಾತು ಬಾರದವರು ಹಾಗೂ ಕಿವಿ ಕೇಳಿಸದವರಿದ್ದಾರೆ. ಶೇ.0.5 ರಷ್ಟಿರುವ ಈ ಅಸಹಾಯಕರು ನಮಗೆ ಅಂಕಿ ಸಂಖ್ಯೆಗಳಲ್ಲ, ಜೀವಂತ ಮನುಷ್ಯರ ನಿರಂತರ ಕಷ್ಟದ ಉದಾಹರಣೆಗಳು. ಹಾಗಾಗಿ ಈ ಸಮಸ್ಯೆಯಿರುವವರನ್ನು ಅತ್ಯಂತ ಎಚ್ಚರಿಕೆಯಿಂದ ಕಾಪಾಡಿಕೊಳ್ಳುವುದು ನಾಗರಿಕ ಸಮಾಜದ ಹಾಗೂ ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.

1966ರಲ್ಲಿ ಮೈಸೂರಿನಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ವಾಕ್ ಮತ್ತು ಶ್ರವಣ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಅಭಿವೃದ್ಧಿ, ಸಂಶೋಧನೆ, ಚಿಕಿತ್ಸೆ, ಪುನರ್ವಸತಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲೂ ಸೇವೆ ಒದಗಿಸುತ್ತಿರುವ ಮಹತ್ವದ ರಾಷ್ಟಿçÃಯ ಸಂಸ್ಥೆಯಾಗಿದೆ ಎಂದರು.

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆಯನ್ನು ಗಳಿಸಿರುವ ಈ ಸಂಸ್ಥೆಯನ್ನು ವಿಶ್ವ ಆರೋಗ್ಯ ಸಂಸ್ಥೆಯು Centre of Excellence ಎಂದು ಗುರುತಿಸಿದ್ದರೆ, ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು Science and Technology Institute ಎಂದು ಗುರುತಿಸಿರುವುದನ್ನು ಸ್ಮರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಜಿಬಿಎ 5 ಪಾಲಿಕೆಗಳ ಆಯುಕ್ತರನ್ನಾಗಿ ಹಿರಿಯ ಅಧಿಕಾರಿಗಳ ನೇಮಕ

ಈ ಸಂಸ್ಥೆಯ ಹೊರವಲಯ ಸೇವಾ ಕೇಂದ್ರಗಳು ಮತ್ತು ನವಜಾತ ಶಿಶು ತಪಾಸಣೆ ಘಟಕಗಳಿಗೆ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸ್ಥಳಾವಕಾಶ ಒದಗಿಸುತ್ತಿದೆ ಎಂದರು.

ನಮ್ಮ ರಾಜ್ಯ ಸರ್ಕಾರದ ಪ್ರಾಯೋಜಿತ ಕಾಕ್ಲಿಯರ್ ಇಂಪ್ಲಾ0ಟ್ ಕಾರ್ಯಕ್ರಮವಾದ ‘ಶ್ರವಣ ಸಂಜೀವಿನಿ’ ಯೋಜನೆಗೆ ರಾಜ್ಯ ಸರ್ಕಾರವು 2024-25ರ ಬಜೆಟ್ಟಿನಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ಮಕ್ಕಳಿಗೆ ದುಬಾರಿ ಕಾಕ್ಲಿಯರ್ ಇಂಪ್ಲಾ0ಟ್ ಶಸ್ತçಚಿಕಿತ್ಸೆಗಳನ್ನು ಉಚಿತವಾಗಿ ಒದಗಿಸಲು 32 ಕೋಟಿ ರೂಗಳನ್ನು ಮೀಸಲಿಟ್ಟಿದೆ.

ಈ ಸಂಸ್ಥೆಯ ಕ್ಲಿನಿಕಲ್ ಮತ್ತು ಪುನರ್ವಸತಿ ಕಾರ್ಯವನ್ನು ಇನ್ನಷ್ಟು ವಿಸ್ತರಿಸಲು ಪೂರಕವಾಗಿ ವರುಣಾದಲ್ಲಿ ನಮ್ಮ ಸರ್ಕಾರ ಉಚಿತವಾಗಿ 10 ಎಕರೆ ಜಮೀನನ್ನು ಸಂಸ್ಥೆಗೆ ನೀಡಿದೆ. ಈ ಸಂಸ್ಥೆಯ ಅಂಗಳದಲ್ಲಿ ರೂ.2.55 ಕೋಟಿ ವೆಚ್ಚದಲ್ಲಿ ಮೈಸೂರು ಮಹಾನಗರ ಪಾಲಿಕೆಯು ಅಂಗವಿಕಲ ಮಕ್ಕಳಿಗೆ ಆಂಫಿಥಿಯೇಟರ್ ನಿರ್ಮಾಣ, ಅಂಗವಿಕಲ ಸ್ನೇಹಿ ಸಲಕರಣೆಗಳು, ಉದ್ಯಾನವನ ಅಭಿವೃದ್ಧಿ, ಮಾತು ಬಾರದ, ಕಿವಿ ಕೇಳದ ಮಕ್ಕಳಿಗೆ ನಿರೀಕ್ಷಣಾ ಕೊಠಡಿ ಮತ್ತು ಮ್ಯೂಸಿಯಂ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಜಿಬಿಎ 5 ಪಾಲಿಕೆಗಳ ಆಯುಕ್ತರನ್ನಾಗಿ ಹಿರಿಯ ಅಧಿಕಾರಿಗಳ ನೇಮಕ
Next: ಹುಟ್ಟು ಹಬ್ಬದ ಸಂಭ್ರಮಾಚರಣೆಯಲ್ಲಿ ಕಿಚ್ಚ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.