ಬೆಂಗಳೂರು: ಕಿಚ್ಚ ಸುದೀಪ್ ಅವರಿಗೆ ಇಂದು 52ನೇ ಹುಟ್ಟುಹಬ್ಬದ ಸಂಭ್ರಮಾಚರಣೆ. ಕಿಚ್ಚನ ಹುಟ್ಟುಹಬ್ಬಕ್ಕೆಂದು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಅಭಿಮಾನಿಗಳ ಜೊತೆ ಸುದೀಪ್ ಅವರು ಮಧ್ಯರಾತ್ರಿ 12 ಗಂಟೆಗೆ ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಯೆಸ್… 52ನೇ ವಸಂತಕ್ಕೆ ಕಾಲಿಟ್ಟಿರುವ ಸುದೀಪ್ ಅವರು ಬರ್ತ್ಡೇ ಸೆಲೆಬ್ರೆಷನ್ ಮಾಡಿದ್ದಾರೆ. ಬೆಂಗಳೂರಿನ ನಂದಿಲಿಂಕ್ ಗ್ರೌಂಡ್ ನಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಸುದೀಪ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ರಾತ್ರಿ 12 ಗಂಟೆಗೆ ಕೇಕ್ ಕತ್ತರಿಸಿ ಫ್ಯಾನ್ಸ್ ಜೊತೆ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: BBK12: ಸೆ. 29ರಿಂದ ದೊಡ್ಮನೆ ಆಟ ಶುರು!
ಅಲ್ಲದೆ ಕಿಚ್ಚನ ಹುಟ್ಟುಹಬ್ಬದ ದಿನದಂದೇ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದು, ಸುದೀಪ್ ಅಭಿನಯದ ಮಾರ್ಕ್ ಸಿನಿಮಾದ ಟೈಟಲ್ ಟೀಸರ್ ರಿಲೀಸ್ ಆಗಿದೆ. ಕಿಚ್ಚನ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.
