ಬೆಂಗಳೂರು: ಸ್ಯಾಂಡಲ್ವುಡ್ ಬಾದಷಾ ಸುದೀಪ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮಾಚರಣೆ. ಸುದೀಪ್ ಅವರು ತಮ್ಮ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಅಭಿಮಾನಿಗಳ ಜೊತೆ ಮಧ್ಯರಾತ್ರಿಯಲ್ಲೇ ಇನ್ನು ಕಿಚ್ಚ ಸುದೀಪ್ ಅವರ ಹುಟ್ಟು ಹುಟ್ಟುಹಬ್ಬಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಭ ಕೋರಿದ್ದಾರೆ. ಇದನ್ನೂ ಓದಿ: ಹುಟ್ಟು ಹಬ್ಬದ ಸಂಭ್ರಮಾಚರಣೆಯಲ್ಲಿ ಕಿಚ್ಚ
ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಡಿಕೆ ಶಿವಕುಮಾರ್ ಅವರು, ಕನ್ನಡ ಚಿತ್ರರಂಗದ ಮಾಣಿಕ್ಯ, ಅಭಿನಯ ಚಕ್ರವರ್ತಿ, ನಟ ಸುದೀಪ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ. ಕನ್ನಡ ಚಿತ್ರರಂಗಕ್ಕೆ ಮತ್ತಷ್ಟು ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಶುಭ ಕೋರಿದ್ದಾರೆ
