ಬೆಂಗಳೂರು: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರು ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಡಿ ಅಧಿಕಾರಿಗಳು ಬಂದನಕೆ ಒಳಪಡಿಸಿದ್ದಾರೆ.
ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ವಶದಲ್ಲಿರುವ ಶಾಸಕ ವೀರೇಂದ್ರ ಪಪ್ಪಿ ಅವರಿಗೆ ಇಂದು (ಗುರುವಾರ ಸೆ. 04) ಜೈಲಾ, ಬೇಲಾ ಅನ್ನೋದು ನಿರ್ಧಾರವಾಗಲಿದೆ.
ಶಾಸಕ ವೀರೇಂದ್ರ ಪಪ್ಪಿಗೆ ಇಂದಿಗೆ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆ ಮತ್ತೆ ಕೋರ್ಟ್ಗೆ ಹಾಜರುಪಡಿಸಲಿದೆ. ಒಂದು ವೇಳೆ ಇಡಿ ಕಸ್ಟಡಿಗೆ ಪಡೆಯದಿದ್ದರೆ ಜೈಲಿಗೆ ತೆರಳುವ ಸಾಧ್ಯತೆ ಇದೆ.
ಇನ್ನು ಈಗಾಗಲೇ ವೀರೇಂದ್ರ ಬ್ಯಾಂಕ್ ಖಾತೆಯಿಂದ 55 ಕೋಟಿ ನಗದು ಫ್ರೀಜ್ ಮಾಡಿರುವುದಾಗಿ ಇಡಿ ಪ್ರಕಟಣೆ ಹೊರಡಿಸಿತ್ತು. ಅಲ್ಲದೇ ಕೆ.ಸಿ ವೀರೇಂದ್ರ ಅವರ 9 ಬ್ಯಾಂಕ್ ಖಾತೆಗಳಲ್ಲಿ ಅಂದಾಜು 40.69 ಕೋಟಿ ನಗದು ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. (ಅಂದಾಜು) ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಅಧಿಕಾರಿಗಳು ಫ್ರೀಜ್ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಶಾಸಕನಿಗೆ ಬಿಗ್ ರಿಲೀಫ್!
ಜೊತೆಗೆ 5 ಐಷಾರಾಮಿ ಕಾರುಗಳನ್ನೂ ಸೀಜ್ ಮಾಡಲಾಗಿದೆ. ಹೀಗಾಗಿ ಹಣದ ಮೂಲ ಪತ್ತೆಗಾಗಿ ಮತ್ತೆ ಕಸ್ಟಡಿಗೆ ಕೇಳಲು ಇಡಿ ಪ್ಲ್ಯಾನ್ ಮಾಡಿಕೊಂಡಿದೆ. ಒಂದು ವೇಳೆ ಕಸ್ಟಡಿಗೆ ಕೇಳದಿದ್ರೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಕಳಿಸಲಿದೆ.
