ಬೆಂಗಳೂರು: ಬೆಂಗಳೂರು ನಗರ ಸಂಚಾರಿ ಪೊಲೀಸರು ವಾಹನ ಸವಾರರಿಗೆ ದಂಡ ಪಾವತಿಸಲು 50% ರಿಯಾಯಿತಿ ನೀಡಲಾಗಿದ್ದು, ಆಗಸ್ಟ್ 23 ರರಿಂದ ಸೆಪ್ಟೆಂಬರ್ 12ರವರೆಗೆ ರಿಯಾಯಿತಿ ಸಮಯವನ್ನು ನಿಗದಿ ಮಾಡಿದ್ದು ಇಲ್ಲಿಯವರೆಗೆ ವಾಹನ ಸವಾರರಿಂದ ಸುಮಾರು 35.72 ಕೋಟಿ ರೂ ದಂಡ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ. ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಆದೇಶ ಹೊರಡಿಸಿ, ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ಆ.23ರಿಂದ ಸೆ.12ರವರೆಗೂ ದಂಡದ ಕೇವಲ ಶೇ.50ರಷ್ಟನ್ನು ಪಾವತಿಸುವಂತೆ ರಿಯಾಯಿತಿ ಘೋಷಿಸಿದ್ದರು. ಇದನ್ನೂ ಓದಿ: ನಾಡ ಹಬ್ಬಕ್ಕೆ ಸಿಎಂಗೆ ವಿಶೇಷ ಆಹ್ವಾನ
