ಬೆಂಗಳೂರು: ಜಿಲ್ಲಾಡಳಿತ ಹಾಗೂ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ನಗರದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೋಲಾರ ಜಿಲ್ಲೆಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ 126 ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆ ಕಾಮಗಾರಿಯ 2ನೇ ಹಂತದಲ್ಲಿ 272 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವತಿ ಯೋಜನೆಯ ಕಾಮಗಾರಿಗೆ ಇಂದು (ಗುರುವಾರ ಸೆ. 04) ಮುಖ್ಯಮಂತ್ರಿಗ ಸಿದ್ದರಾಮಯ್ಯ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮುಖಾಂತರ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೆರವೇರಿಸಿದರು. ಇದನ್ನೂ ಓದಿ: ನಾಡ ಹಬ್ಬಕ್ಕೆ ಸಿಎಂಗೆ ವಿಶೇಷ ಆಹ್ವಾನ
ಕೆರೆಗಳಿಗೆ ನೀರು ತುಂಬಿಸುವ ಈ ಯೋಜನೆಯಿಂದ ಬಯಲು ಸೀಮೆಯ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷಿ ಚಟುವಟಿಕೆಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.
