ಬೆಂಗಳೂರು: ಧರ್ಮಸ್ಥಳ ಬುರುಡೆ ಕೇಸ್ ಗೆ ಸಂಬಂಧಿಸಿದಂತೆ ಕೇವಲ ಕರ್ನಾಟಕ ರಾಜ್ಯ ಮಾತ್ರವಲ್ಲದೇ ಇಡೀ ದೇಶದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದು, ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ನಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡುವ YouTuber ವಿರುದ್ಧ ಈಗಾಗಲೇ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಲ್ಲದೆ ಮತ್ತೆ ಇದೀಗ ಕೇರಳ ಮೂಲದ ಯೂಟ್ಯೂಬರ್ ಮನಾಫ್ ಎಂಬುವ ವ್ಯಕ್ತಿಗೆ ಎಸ್ಐಟಿ ನೋಟಿಸ್ ನೀಡಿದೆ.
ಹೌದು, ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್ನನ್ನು ಎಸ್ಐಟಿ ವಿಚಾರಣೆ ನಡೆಸಿದೆ. ಈ ಮಧ್ಯೆ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಕೇರಳ ಮೂಲದ ಯೂಟ್ಯೂಬರ್ ಮನಾಫ್ಗೂ ಎಸ್ಐಟಿ ನೋಟಿಸ್ ನಿಡಿದೆ.
ಜಯಂತ್.ಟಿ ಮೂಲಕ ಬುರುಡೆ ಕಥೆಯನ್ನು ಕೇರಳಕ್ಕೂ ಹಬ್ಬಿಸಿದ್ದ. ಧರ್ಮಸ್ಥಳದಲ್ಲಿ ನೂರಾರು ಹೆಣ್ಮಕ್ಕಳ ಮೇಲೆ ಅತ್ಯಾಚಾರ, ಕೊಲೆ ಮಾಡಿ ಹೂಳಲಾಗಿದೆ ಎಂದು ಪ್ರಚಾರ ಮಾಡಿದ್ದ. ಕಾಡಿನಿಂದ ಬುರುಡೆ ತಂದಿರುವ ಒರಿಜಿನಲ್ ವಿಡಿಯೋ ಮನಾಫ್ ಯುಟ್ಯೂಬ್ನಲ್ಲಿ ಜುಲೈ 11 ರಂದು ಅಪ್ಲೋಡ್ ಆಗಿತ್ತು. ಇದನ್ನೂ ಓದಿ: ಡೈರೆಕ್ಟಾಗಿ ಮೋದಿಗೆ ಟಾಂಗ್ ಕೊಟ್ರಾ ಡಿಕೆಶಿ..?
ಬಂಗ್ಲೆಗುಡ್ಡೆಯಿಂದಲೇ ಬುರುಡೆ ತಂದಿರುವುದಾಗಿ ಜಯಂತ್.ಟಿ ಹೇಳಿದ್ದಾರೆ. ಕಾಡು ಪ್ರದೇಶದಲ್ಲಿ ಶೂಟ್ ಮಾಡಿರುವ ವಿಡಿಯೋ ಇದಾಗಿದ್ದು, ಮರಕ್ಕೆ ಸೀರೆ ಬಿಗಿದ ಸ್ಥಳದ ಪಕ್ಕದಲ್ಲೇ ಪತ್ತೆಯಾಗಿರುವ ಬುರುಡೆಯನ್ನ ಕತ್ತಿ ಮೂಲಕ ಎತ್ತಿಕೊಂಡು ತಂದಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಆ ಮೂಲಕ ಧರ್ಮಸ್ಥಳ ಭಾಗದಿಂದಲೇ ಬುರುಡೆ ಎತ್ತಿಕೊಂಡು ಬಂದಿರುವ ಅನುಮಾನ ವ್ಯಕ್ತವಾಗಿತ್ತು. ಹೀಗಾಗಿ ತನಿಖೆಗೆ ಹಾಜರಾಗುವಂತೆ ನೋಟಿಸ್ ಕೊಡಲಾಗಿದೆ.
