ಮುಂಬೈ: ಗಣೇಶ ಹಬ್ಬವನ್ನು ಇಡೀ ದೇಶದಲ್ಲಿ ಬಹಳ ಸಡಗರದಿಂದ ಆಚರಿಸಲಾಗುತ್ತದೆ. ಅದರಲ್ಲೂ ಕೂಡ ಮುಂಬೈನಲ್ಲಿ ಗಣೇಶ ಚತುರ್ಥಿಯನ್ನು ಬಹಳ ಅದ್ದೂರಿಯಾಗಿಆಚರಿಸಲಾಗುತ್ತಿದೆ.
ಇನ್ನು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮುಂಬೈನಲ್ಲಿ ಗಣೇಶ ವಿಸರ್ಜನೆಗೆ ನಾಳೆ (ಶನಿವಾರ ಸೆ. 06) ಎಲ್ಲ ರೀತಿ ತಯಾರಿಗಳು ನಡೆಯುತ್ತಿರುವ ಬೆನ್ನಲ್ಲೇ ಇದೀಗ ಮುಂಬೈನಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಬೆದರಿಕೆಯ ಕರೆಯೊಂದು ಎಲ್ಲರ ನಿದ್ದೆಗೆಡಿಸಿದೆ.
ಹೌದು, ಮುಂಬೈನಲ್ಲಿ 34 ವಾಹನಗಳಲ್ಲಿ ಮಾನವ ಬಾಂಬ್ಗಳನ್ನು ಇರಿಸಲಾಗಿದೆ ಎಂದು ಪೊಲೀಸರಿಗೆ ಎಚ್ಚರಿಕೆಯ ಸಂದೇಶ ಬಂದಿದ್ದು, ಪೊಲೀಸರಿಗೆ ತಲೆ ಬಿಸಿ ಶುರುವಾಗಿದೆ. ಲಷ್ಕರ್-ಎ-ಜಿಹಾದಿ ಎಂಬ ಸಂಘಟನೆಯಿಂದ ಬಾಂಬ್ ಬೆದರಿಕೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಂಬೈಯನ್ನು ಬೆಚ್ಚಿಬೀಳಿಸುವ ಸಂದೇಶವೊಂದು ಪೊಲೀಸರಿಗೆ ಬಂದಿದೆ. ಸಂಚಾರ ಪೊಲೀಸರ ಅಧಿಕೃತ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ನಗರದಲ್ಲಿ 34 ವಾಹನಗಳಲ್ಲಿ ಬಾಂಬ್ ಇಡಲಾಗಿದೆ ಎನ್ನುವ ಎಚ್ಚರಿಕೆ ಸಂದೇಶ ಬಂದಿದೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್; ಮತ್ತೊಬ್ಬ ಯುಟುಬರಿಗೆ ಎಸ್ಐಟಿ ನೋಟಿಸ್!
ಲಷ್ಕರ್-ಎ-ಜಿಹಾದಿ ಎಂದು ಕರೆದುಕೊಳ್ಳುವ ಸಂಘಟನೆಯು 14 ಪಾಕಿಸ್ತಾನಿ ಭಯೋತ್ಪಾದಕರು ಭಾರತವನ್ನು ಪ್ರವೇಶಿಸಿದ್ದಾರೆ ಮತ್ತು ಸ್ಫೋಟಗಳಿಗೆ 400 ಕೆಜಿ ಆರ್ಡಿಎಕ್ಸ್ ಬಳಸಲಾಗುವುದು ಎಂದು ಹೇಳಿದೆ. ಮುಂಬೈ ಪೊಲೀಸರು ಜಾಗರೂಕರಾಗಿದ್ದಾರೆ ಮತ್ತು ಇಡೀ ರಾಜ್ಯದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಬೆದರಿಕೆಯ ಪ್ರತಿಯೊಂದು ಸಾಧ್ಯತೆ ಮತ್ತು ಮೂಲವನ್ನು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
