Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತಿದೆ: ಸಿಎಂ
  • Bangalore
  • Front news
  • Politics
  • State

ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತಿದೆ: ಸಿಎಂ

Praja Vahini September 15, 2025 1 minute read
WhatsApp Image 2025-09-15 at 17.05.40
Spread the love

ಬೆಂಗಳೂರು: ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ. ದೇಶದಲ್ಲಿ ವಿವಿಧ ಜಾತಿ, ಧರ್ಮಗಳ ವ್ಯವಸ್ಥೆಯಿದೆ. ಬಹುಸಂಸ್ಕೃತಿಯುಳ್ಳ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಯಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಪ್ರಜಾಪ್ರಭುತ್ವ ದಿನಾಚರಣೆಯ ಘೋಷವಾಕ್ಯ ‘ನನ್ನ ಮತ ನನ್ನ ಹಕ್ಕು’. ಈ ಶಕ್ತಿಯನ್ನು ದುರ್ಬಲಗೊಳಿಸುವ ಹುನ್ನಾರ ಪಟ್ಟಭದ್ರ ಹಿತಾಸಕ್ತಿಗಳಿಂದ ನಡೆದಿದೆ. ಶ್ರೀಮಂತರಿಗೆ ಅಧಿಕಾರ ದೊರೆಯುವ ಕಾಲವೊಂದಿತ್ತು. ಆದರೆ ಈಗ ಶ್ರೀಮಂತ ಬಡವ ಬಲ್ಲಿಗ ಎಂಬ ಬೇಧವಿಲ್ಲದೇ, ಎಲ್ಲರಿಗೂ ಒಂದೇ ಮತದ ಅಧಿಕಾರ ನೀಡಲಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅವರು ‘’ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ’ ಎಂದರು. ಆದರೆ ಇದರ ದುರುಪಯೋಗಪಡಿಸಿಕೊಂಡು, ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದ್ದು, ಇದನ್ನು ನಡೆಯದಂತೆ ನೋಡಿಕೊಳ್ಳಬೇಕಿದೆ. ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯವಾಗುತ್ತದೆ.

ಅಧಿಕಾರವನ್ನು ಉಳಿಸಿಕೊಳ್ಳಲು ಮತಗಳ್ಳತನದ ಹಾದಿಯನ್ನು ಹಿಡಿದಿದ್ದಾರೆ. ಆದ್ದರಿಂದ ನನ್ನ ಮತ ನನ್ನ ಹಕ್ಕು ಎಂಬುದು ಇಂತಹ ಸನ್ನಿವೇಶದಲ್ಲಿ ಪ್ರಮುಖವಾಗಿದ್ದು, ಮತಗಳ ದುರುಪಯೋಗವಾಗಬಾರದು. ಮತಗಳ್ಳತನಕ್ಕೆ ಅವಕಾಶ ನೀಡಬಾರದು.

ಸಾಹಿತಿ ಬಾನು ಮುಷ್ತಾಕ್ ಅವರು ಅನ್ಯಧರ್ಮದವರೆಂಬ ಕಾರಣಕ್ಕೆ ದಸರಾ ಉದ್ಘಾಟಿಸಬಾರದೆಂದು ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಇದು ಸರಿಯಲ್ಲ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕು. ಜಾತಿ, ಧರ್ಮ, ವರ್ಗವ್ಯವಸ್ಥೆಯನ್ನು ಮೀರಿ, ಸಮಾನತೆ ನೆಲೆಸಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಪಟ್ಟಭದ್ರ ಹಿತಾಸಕ್ತಿಗಳ ಮತಾಂಧತೆಯ ವರ್ತನೆಯನ್ನು ಎಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು.

ಚರ್ಚೆಯೇ ಪ್ರಜಾಪ್ರಭುತ್ವದ ಜೀವಾಳ. ಜನರನ್ನು ತಪ್ಪದಾರಿಗೆಳೆಯುವ ಪ್ರಯತ್ನಗಳು ಖಂಡನೀಯ. ನಾವು ನೀವೆಲ್ಲರೂ ಸೇರಿ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳನ್ನು ಬಲಪಡಿಸಲು ಶ್ರಮಿಸೋಣ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಬ್ಯಾಲೆಟ್‌ ಎನ್ನುವುದು ಬುಲೆಟ್‌ಗಿಂತ ಶಕ್ತಿಶಾಲಿ: ಡಿಕೆಶಿ
Next: ಮತೀಯ ಅಂಧ ಭಾವನೆಗಳಿಂದ ಪ್ರತಾಪ್ ಸಿಂಹ ಹೊರಬರಲಿ: ಮಹದೇವಪ್ಪ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.