ಬೆಂಗಳೂರು: ಈ ಬಾರಿ ಮೈಸೂರು ದಸರಾವನ್ನು ಉದ್ಘಾಟನೆ ಮಾಡಲು ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.
ಇನ್ನು ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡಬಾರದು ಎಂದು ರಾಜ್ಯದಲ್ಲಿ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದರು. ಅಲ್ಲದೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದರು. ಆದರೆ ಈ ಅರ್ಜಿಯನ್ನು ಇದೀಗ ಕೋರ್ಟ್ ವಜಾ ಗೊಳಿಸಿದೆ.
ಇನ್ನು ಕೋರ್ಟ್ ಅರ್ಜಿಯನ್ನು ವಜಗೊಳಿಸುತ್ತಿದ್ದಂತೆ ಈ ಕುರಿತು ಸಚಿವ ಮಹದೇವಪ್ಪ ಅವರು ಪ್ರತಿಕ್ರಿಯೆಸಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನ್ಯಾಯಾಲಯ ಸಂವಿಧಾನದ ಕಸ್ಟೋಡಿಯನ್. ಸಂವಿಧಾನದ ಪ್ರಕಾರ ಏನು ಮಾಡಬೇಕು ಅಂತ ಕೋರ್ಟ್ ಹೇಳಿದೆ. ಇನ್ನಾದ್ರು ಅವರು ಬುದ್ಧಿ ಕಲಿಯಲಿ. ಅವರಲ್ಲಿ ತುಂಬಿರೋ ಮತೀಯ ಅಂಧ ಭಾವನೆಗಳು ಹೊರಗೆ ಬಂದು ಭಾರತೀಯ ನಾಗರಿಕರಾಗಿ ನಡೆದುಕೊಳ್ಳಲಿ ಎಂದಿದ್ದಾರೆ.
ರಾಜ್ಯದಲ್ಲಿ ಚುನಾಯಿತ ಸರ್ಕಾರ ಇದೆ. ಚುನಾಯಿತ ಸರ್ಕಾರದಲ್ಲಿ ಸಂವಿಧಾನಾತ್ಮಕವಾಗಿ ನಮ್ಮ ನಡೆ ನಿರ್ಧಾರ ಆಗಬೇಕು. ದಸರಾ ಉದ್ಘಾಟನೆ ವಿಚಾರದಲ್ಲಿ ನಾವು ಅದಕ್ಕೆ ಪೂರಕವಾದ ನಿರ್ಧಾರ ಮಾಡಿದ್ವಿ. ಅನವಶ್ಯಕವಾಗಿ ಅಂಕಣಕಾರರ ಆಗಿದ್ದವರು, ಎಂಪಿ ಆದವರು, ಸಂವಿಧಾನ ಹಾಗೂ ಅದರ ಹಕ್ಕುಗಳನ್ನ ತಿಳಿದುಕೊಂಡ ಪ್ರತಾಪ್ ಸಿಂಹ ಅವರು ಹೀಗೆ ಮಾತಾಡಿದ್ರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.
