ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು 75 ನೇಯ ವಸಂತಕ್ಕೆ ಕಾಲಿಟ್ಟಿದ್ದು, ಇಂದು (ಬುಧವಾರ ಸೆಪ್ಟೆಂಬರ್ 17) ಅವರ ಜನ್ಮದಿನವನ್ನು ಎಲ್ಲೆಡೆ ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಮೋದಿ ಅವರ ಹುಟ್ಟುಹಬ್ಬಕ್ಕೆ ದೇಶ ಮಾತ್ರವಲ್ಲದೆ ಬೇರೆ ದೇಶಗಳಿಂದಲೂ ಗಣ್ಯಾತಿ ಗಣ್ಯ ವ್ಯಕ್ತಿಗಳು ಅವರಿಗೆ ಕರೆ ಮಾಡಿ ಹಾಗೂ ಸೋಶಿಯಲ್ ಮೀಡಿಯಾಗಳ ಮೂಲಕ ಹುಟ್ಟು ಹಬ್ಬದ ಶುಭ ಕೋರುತ್ತಿದ್ದಾರೆ.
ಅಲ್ಲದೆ ಮೋದಿಯವರ ಹುಟ್ಟುಹಬ್ಬಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಈ ಎಲ್ಲಾ ಭಿನ್ನಾಭಿಪ್ರಾಯಗಳ ನಡುವೆ ಎಲ್ಲವನ್ನೂ ಮರೆತು ಟ್ರಂಪ್ ಪ್ರಧಾನಿಗೆ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: BPL ಕಾರ್ಡ್ಗಳನ್ನ ರದ್ದು ಮಾಡಲ್ಲ: ಮುನಿಯಪ್ಪ
ಪ್ರಧಾನಿ ಮೋದಿ ಅವರೊಂದಿಗಿನ ತಮ್ಮ ಸಂಭಾಷಣೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಅಧ್ಯಕ್ಷ ಟ್ರಂಪ್, ನನ್ನ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅದ್ಭುತವಾದ ಸಂಭಾಷಣೆ ನಡೆಯಿತು. ನಾನು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ. ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸಲು ನೀವು ನೀಡಿದ ಬೆಂಬಲಕ್ಕೆ ಧನ್ಯವಾದಗಳು ಎಂದು ಬರೆದಿದ್ದಾರೆ.
