Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕುರುಬ ಸಮುದಾಯವನ್ನು ST ಗೆ ಸೇರಿಸಲು ಮತ್ತೆ ಕೇಂದ್ರಕ್ಕೆ ಶಿಫಾರಸ್ಸು: ಸಿಎಂ
  • Politics
  • State

ಕುರುಬ ಸಮುದಾಯವನ್ನು ST ಗೆ ಸೇರಿಸಲು ಮತ್ತೆ ಕೇಂದ್ರಕ್ಕೆ ಶಿಫಾರಸ್ಸು: ಸಿಎಂ

Praja Vahini September 17, 2025 1 minute read
WhatsApp Image 2025-09-17 at 16.34.35
Spread the love

ಕಲ್ಬುರ್ಗಿ: ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಹೆಸರನ್ನು ಬರೆಸಿದರೆ ಮಾತ್ರ ಸಮಾಜದ ಸ್ಥಿತಿ ಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ‌ ಅನುಕೂಲಗಳು ಸಿಗುತ್ತವೆ ಎಂದು ಕರೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಜಾತಿ ಸಮುದಾಯಗಳ ಸ್ಪಷ್ಟ ಸ್ಥಿತಿ ಅರಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.

ಕರ್ನಾಟಕ ರಾಜ್ಯ ಕುರುಬಗೊಂಡ ಸಂಘ ಮತ್ತು ಸಂಗೊಳ್ಳಿ ರಾಯಣ್ಣ ಯುವಕ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಯಣ್ಣ ಅವರ ಮೂರ್ತಿ ಅನಾವರಣಗೊಳಿಸಿ, ನಗರ ಸಿಟಿ ಬಸ್ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣರ ಹೆಸರು ನಾಮಕರಣ ಮಾಡಿ ಮಾತನಾಡಿದ ಅವರು, ಕುರುಬ ಸಮುದಾಯವನ್ನು ST ಗೆ ಸೇರಿಸಲು ಹಿಂದೆಯೇ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಇದನ್ನು ಕೇಂದ್ರ ಸರ್ಕಾರ ವಾಪಾಸ್ ಕಳುಹಿಸಿದೆ. ಹೀಗಾಗಿ ಮತ್ತೆ ಹೆಚ್ಚುವರಿ ಅಂಕಿ ಅಂಶಗಳು ಮತ್ತು ದಾಖಲೆಗಳ ಸಮೇತ ಕೇಂದ್ರಕ್ಕೆ ಮತ್ತೆ ಶಿಫಾರಸ್ಸು ಕಳುಹಿಸಲಾಗುವುದು ಎಂದು ಸಿ.ಎಂ ಭರವಸೆ ನೀಡಿದರು.

ರಾಯಣ್ಣ ಜನ್ಮ ದಿನ ಸ್ವಾತಂತ್ರ್ಯೋತ್ಸವದ ಆಗಸ್ಟ್ 15. ರಾಯಣ್ಣರನ್ನು ಬ್ರಿಟಿಷರು ಗಲ್ಲಿಗೆ ಏರಿಸಿದ್ದು ಜನವರಿ 26ರ ಗಣರಾಜ್ಯೋತ್ಸವ ದಿನದಂದು. ಇದು ಕಾತಾಳೀಯ ಆದರೂ ಸತ್ಯವಾದ ಸಂಗತಿ ಎಂದರು. ಸ್ವಾತಂತ್ರ್ಯ ಸೇನಾನಿ ರಾಯಣ್ಣ ಯುವಕರಿಗೆ ಪ್ರೇರಣೆ ಆಗಿದ್ದಾರೆ ಎಂದರು.‌

ಶೇ7 ರಷ್ಟಿರುವ ಕುರುಬ ಸಮುದಾಯ ಶಿಕ್ಷಣದಲ್ಲಿ ಬಹಳ ಹಿಂದುಳಿದಿದೆ. ಆದ್ದರಿಂದ ಸಮುದಾಯದ ಪ್ರತಿಯೊಬ್ಬರೂ ವಿದ್ಯಾವಂತರಾಗುವುದು ಅವಶ್ಯವಾಗಿದೆ. ಸಮುದಾಯವನ್ನು ಶಿಕ್ಷಣ ಕ್ಷೇತ್ರದಲ್ಲಿ ಉನ್ನತೀಕರಿಸಬೇಕಿದೆ ಎಂದರು.

ಇಡೀ ರಾಜ್ಯ ಪ್ರವಾಸ ಮಾಡಿ ಕನಕ ಗುರುಪೀಠ ಸ್ಥಾಪಿಸಿದೆವು. ಪೀಠದ ಉದ್ದೇಶ, ಎಲ್ಲಾ ಶೋಷಿತ ಸಮುದಾಯಗಳಿಗೂ ಶಿಕ್ಷಣ ಕೊಡುವುದೇ ಆಗಿತ್ತು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ನಾರಾಯಣಗುರು ಇಬ್ಬರೂ ಶಿಕ್ಷಣದಿಂದ ಸ್ವತಂತ್ರ ರಾಗಬಹುದು, ಸ್ವಾಭಿಮಾನಿಗಳಾಗಬಹುದು ಎಂದು ಹೇಳಿದ್ದಾರೆ. ಜಾತಿ ವ್ಯವಸ್ಥೆಯ ಕಾರಣಕ್ಕೆ ಅಸಮಾನತೆ ಸೃಷ್ಟಿಯಾಗಿದೆ ಎಂದರು. ಇದನ್ನೂ ಓದಿ: ಪ್ರತಾಪ್ ಸಿಂಹ ಅನ್ನೋ ಹೆಸರು ಇಡುವ ಬದಲು ನಾಯಿ ಅಂತ ಹೆಸರು ಇದ್ದಿದ್ರೆ ಚೆನ್ನಾಗಿರ್ತಿತ್ತು: MLA ಉದಯ್

ಜಾತಿ ರಹಿತ, ವರ್ಗ ರಹಿತ ಸಮಾಜ ಆಗಬೇಕು ಎನ್ನುವುದು ಬುದ್ದ, ಬಸವ, ಅಂಬೇಡ್ಕರ್ ಎಲ್ಲರ ಆಶಯವಾಗಿತ್ತು. ನಮ್ಮ ಸರ್ಕಾರ ಕೂಡ ಅಸಮಾನತೆ ಹೋಗಲಾಡಿದರು ಹತ್ತು ಹಲವು ಭಾಗ್ಯಗಳನ್ನು ನೀಡಿ, ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಎಂದರು.

ಆರ್ಥಿಕ ಚಲನೆ ಇಲ್ಲದ ಸಮಾಜ ಪ್ರಗತಿ ಕಾಣಲು ಸಾಧ್ಯವಿಲ್ಲ. ಆದ್ದರಿಂದ ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಿತ ಸಮುದಾಯಗಳು ಚಲನೆ ಕಂಡುಕೊಳ್ಳಬೇಕು. ಆಗಲೇ ಬುದ್ದ, ಬಸವ, ಅಂಬೇಡ್ಕರ್ ಕನಸು ನನಸಾಗುತ್ತದೆ. ಈ ಕನಸು ನನಸಾಗುವ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗಲೇ ಹಿಂದುಳಿದವರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಿಸಿದ್ಧೆ  ಎಂದರು.

About the Author

Praja Vahini

Editor

View All Posts

Spread the love

Post navigation

Previous: ಪ್ರತಾಪ್ ಸಿಂಹ ಅನ್ನೋ ಹೆಸರು ಇಡುವ ಬದಲು ನಾಯಿ ಅಂತ ಹೆಸರು ಇದ್ದಿದ್ರೆ ಚೆನ್ನಾಗಿರ್ತಿತ್ತು: MLA ಉದಯ್
Next: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.