Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ
  • Front news
  • Politics
  • State

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ

Praja Vahini September 17, 2025 1 minute read
WhatsApp Image 2025-09-17 at 16.48.18
Spread the love

ಕಲಬುರಗಿ: ಕಲ್ಯಾಣಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸೃಜಿಸುವ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಂಡಿದ್ದು, ಅಧಿಕಾರಿಗಳನ್ನು ಸಧ್ಯದಲ್ಲಿಯೇ ನೇಮಿಸಲಾಗುವುದು. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಹೊಸ ವೇಗ ದೊರೆಯಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಲಬುರಗಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬೆಳೆಹಾನಿಯಾಗಿರುವುದಕ್ಕೆ ಪರಿಹಾರ ನೀಡಲು ಅನುಕೂಲವಾಗುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬೆಳೆಪರಿಹಾರವನ್ನು ರೈತರಿಗೆ ವಿತರಿಸಲಾಗುವುದು ಎಂದು

ಇನ್ನೊಂದು ವಾರದಲ್ಲಿ ಸಮೀಕ್ಷಾ ವರದಿ ಸಲ್ಲಿಕೆಯಾಗುವ ನಿರೀಕ್ಷೆಯಿದ್ದು, ನಂತರ ಬೆಳೆಹಾನಿ ಪರಿಹಾರ ವಿತರಿಸಲಾಗುವುದು. ರಾಜ್ಯದಲ್ಲಿ ಒಟ್ಟಾರೆ ಈ ಬಾರಿ ಅದೃಷ್ಟವಶಾತ್ ವಾಡಿಕೆಗಿಂತ ಶೇ.4 ರಷ್ಟು ಮಳೆ ಜಾಸ್ತಿಯಾಗಿದೆ. ಬೀದರ್, ಕಲ್ಬುರ್ಗಿ, ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಬೆಳೆ ಹಾನಿ ಹೆಚ್ಚು ಸಂಭವಿಸಿದ್ದು, ಬೆಳೆ ಪರಿಹಾರ ವಿತರಿಸಲಾಗುವುದು. 2024-25 ನೇ ಸಾಲಿನಲ್ಲಿ 656 ಕೋಟಿ ರೂ. ಬೆಳೆವಿಮೆ ಪಾವತಿಯಾಗಿದೆ. ಬೆಳೆವಿಮೆ ಮಾಡಿಕೊಳ್ಳದ ರೈತರಿಗೆ ಪರಿಹಾರ ನೀಡುವ ಬಗ್ಗೆ ಪರಿಶೀಲಿಸಿ ತೀರ್ಮಾನಿಸಲಾಗುವುದು ಹಾಗೂ ರೈತರ ಬೇಡಿಕೆಯಂತೆ ಸಾಲಮನ್ನಾ ಮಾಡುವ ಬಗ್ಗೆ ಪರೀಶೀಲಿಸಲಾಗುವುದು ಎಂದರು.

ಬ್ಯಾಂಕ್ ದರೋಡೆ-ಮುಂಜಾಗ್ರತಾ ಕ್ರಮಕ್ಕಾಗಿ ಪೊಲೀಸರಿಗೆ ಸೂಚನೆ

ವಿಜಯಪುರದಲ್ಲಿ ಎಸ್.ಬಿ.ಐ ಬ್ಯಾಂಕ್ ದರೋಡೆಯಾಗಿರುವ ಬಗ್ಗೆ ಹಾಗೂ ಬ್ಯಾಂಕ್ ನ ಸುರಕ್ಷತೆ ಬಗ್ಗೆ ಪ್ರತಿಕ್ರಿಯೆ ನೀಡಿ, ಘಟನೆಗೆ ಬಳಸಿದ ಕಾರು ಪತ್ತೆಯಾಗಿದ್ದು, ಕಳ್ಳತನದಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ಪತ್ತೆಹಚ್ಚುವಂತೆ ಜಿಲ್ಲಾ ಎಸ್ ಪಿ ಗೆ ಸೂಚಿಸಲಾಗಿದೆ ಹಾಗೂ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಜಾಗೃತರಾಗಿರುವಂತೆ ತಿಳಿಸಲು ಸೂಚಿಸಲಾಗಿದೆ. ಬ್ಯಾಂಕಿಗೆ ಸುರಕ್ಷತಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವುದು ಆಯಾ ಬ್ಯಾಂಕಿನ ಜವಾಬ್ದಾರಿಯಾಗಿರುತ್ತದೆ. ಪೊಲೀಸರು ಬ್ಯಾಂಕಿಗೆ ಸುರಕ್ಷತೆ ನೀಡುತ್ತಾರೆ. ಇಂತಹ ಪ್ರಕರಣಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು.

ಪ್ರವಾಹಕ್ಕೆ ಪರಿಹಾರ

ಕಳೆದ ವರ್ಷ ರಾಜ್ಯದಲ್ಲಿ ಪ್ರವಾಹಪರಿಸ್ಥಿತಿಯ ಬಗ್ಗೆ ಕೇಂದ್ರಕ್ಕೆ ತಡವಾಗಿ ವರದಿ ನೀಡಲಾಗಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಪ್ರವಾಹಪರಿಸ್ಥಿತಿಯ ವರದಿಯನ್ನು ಕೇಂದ್ರಕ್ಕೆ ಸಕಾಲದಲ್ಲಿಯೇ ನೀಡಲಾಗಿತ್ತು. ಆದರೆ ಕೇಂದ್ರಸರ್ಕಾರವೇ ಈ ಬಗ್ಗೆ ನಿಧಾನ ನಿಲುವು ತಾಳಿದ್ದರಿಂದ, ರಾಜ್ಯ ಸರ್ಕಾರ, ಸರ್ವೋಚ್ಛ ನ್ಯಾಯಾಲಯದ ಮೊರೆ ಹೋಗಿ, ಪರಿಹಾರವನ್ನು ಪಡೆದ ಬಗ್ಗೆ ಮುಖ್ಯಮಂತ್ರಿಗಳು ವಿವರಿಸಿದರು. ಇದನ್ನೂ ಓದಿ: ಕುರುಬ ಸಮುದಾಯವನ್ನು ST ಗೆ ಸೇರಿಸಲು ಮತ್ತೆ ಕೇಂದ್ರಕ್ಕೆ ಶಿಫಾರಸ್ಸು: ಸಿಎಂ

ಬಿಪಿಎಲ್ ಕಾರ್ಡ್-ಅನರ್ಹರನ್ನು ತೆಗೆದು ಅರ್ಹರನ್ನು ಸೇರಿಸಲು ಸೂಚನೆ

ಅನರ್ಹರ ಬಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಪಿಎಲ್ ಕಾರ್ಡ್ ಇರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅನರ್ಹರನ್ನು ಬಿಪಿಎಲ್ ಕಾರ್ಡ್ ನ ಸೌಲಭ್ಯದಿಂದ ತೆಗೆದುಹಾಕುವಂತೆ ಹಾಗೂ ಅರ್ಹರಿಗೆ ಈ ಸೌಲಭ್ಯವನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ರಾಜ್ಯದ ಮನವಿಗೆ ಕೇಂದ್ರ ಸ್ಪಂದಿಸುತ್ತಿಲ್ಲ

ರಾಜ್ಯಕ್ಕೆ ನೀಡಲಾಗುವ ಎನ್ ಡಿಆರ್ ಎಪ್ ಪರಿಹಾರವನ್ನು ಹೆಚ್ಚಿಸುವಂತೆ ಕೇಂದ್ರಸರ್ಕಾರವನ್ನು ಹಲವುಬಾರಿ ಕೋರಲಾಗಿದೆ. ಈ ಬಗ್ಗೆ ಕೇಂದ್ರ ವಿತ್ತಸಚಿವರನ್ನು ಹಾಗೂ ಕೇಂದ್ರ ಗೃಹಸಚಿವರನ್ನು ಖುದ್ದು ಭೇಟಿ ಮಾಡಲಾಗಿದ್ದರೂ, ಇದುವರೆಗೂ ಸರ್ಕಾರದ ಮನವಿಗೆ ಕೇಂದ್ರ ಸ್ಪಂದಿಸುತ್ತಿಲ್ಲ ಎಂದರು.

ಸಿಐಡಿ ತನಿಖೆ ನಡೆಸಲು ಸೂಚನೆ

ಅನ್ನಭಾಗ್ಯದ ಅಕ್ಕಿ ಹೊರದೇಶಕ್ಕೆ ರಫ್ತಾಗುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಸಿಐಡಿ ತನಿಖೆ ನಡೆಸಲಾಗುತ್ತಿದ್ದು, ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಕುರುಬ ಸಮುದಾಯವನ್ನು ST ಗೆ ಸೇರಿಸಲು ಮತ್ತೆ ಕೇಂದ್ರಕ್ಕೆ ಶಿಫಾರಸ್ಸು: ಸಿಎಂ
Next: ಮೋದಿ ಹುಟ್ಟು ಹಬ್ಬದ ನಿಮಿತ್ಯ ರಕ್ತದಾನ ಶಿಬಿರ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.