ಬೆಂಗಳೂರು: ಬೆಂಗಳೂರು ಉತ್ತರ ಮಹಾನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಮತ್ತು ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಆರ್.ವಿಶ್ವನಾಥ್ ರವರು ಯಲಹಂಕ ವಿಭಾಗದಲ್ಲಿ ನಡೆಯುತ್ತಿರುವ ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಪರಿಶೀಲನೆಯ ವೇಳೆ, ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಅಲ್ಲಾಳಸಂದ್ರ ಕೆರೆ – ಉಳಿದಿರುವ ಫೆನ್ಸಿಂಗ್ ಕಾಮಗಾರಿಯನ್ನು ಪೂರ್ಣಗೊಳಿಸಿ, ವೆಟ್ಲ್ಯಾಂಡ್ ಹಾಗೂ ಸಿಲ್ಟ್ ಟ್ರ್ಯಾಪ್‌ಗಳನ್ನು ಸ್ವಚ್ಛಗೊಳಿಸಿ, ಸಾರ್ವಜನಿಕರಿಗಾಗಿ ಹೆಚ್ಚುವರಿ ಶೌಚಾಲಯಗಳನ್ನು ನಿರ್ಮಿಸಲು ಸೂಚನೆ ನೀಡಿದರು.
ವೈಟ್ ಟಾಪಿಂಗ್ ಕಾಮಗಾರಿಗಳು – ಗುತ್ತಿಗೆದಾರರಿಗೆ ಈಗಾಗಲೇ ಒಪ್ಪಿಗೆ ಪತ್ರ ನೀಡಲಾಗಿದ್ದು, ತಕ್ಷಣವೇ ಕಾಮಗಾರಿಯನ್ನು ಪ್ರಾರಂಭಿಸಲು ಸೂಚನೆ ನೀಡಿದರು.
ಫ್ಲೈಓವರ್ ಕಾಮಗಾರಿ – ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ, ಹೆಚ್ಚಿನ ವಿಸ್ತರಣಾ ಅವಧಿಗೆ ಅವಕಾಶವಿಲ್ಲ ಎಂದು ತಿಳಿಸಿದರು. ಭೂಸ್ವಾಧೀನದ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸಲಾಗುವುದಾಗಿ ತಿಳಿಸಿದರು.
ರೈಲ್ವೇ ಸೇತುವೆಯ ಕೆಳ ರಸ್ತೆ – ರೈಲ್ವೇ ಆವರಣದಲ್ಲಿ ಬಾಕ್ಸ್ ಪುಷಿಂಗ್ ಕಾರ್ಯ ಪೂರ್ಣಗೊಂಡಿದ್ದು, ಬಾಕಿ ಇರುವ ಅಪ್ರೋಚ್ ಕಾಮಗಾರಿಗಳು ಹಾಗೂ ಭೂಸ್ವಾಧೀನವನ್ನು ವೇಗವಾಗಿ ಮುಗಿಸಲಾಗುವುದು. ರೈಲ್ವೇ ಇಲಾಖೆಗಳಿಗೆ ನೀಡಬೇಕಾದ ಪರಿಹಾರವನ್ನು 15 ದಿನಗಳಲ್ಲಿ ಪಾವತಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ಮೋದಿ ಹುಟ್ಟು ಹಬ್ಬದ ನಿಮಿತ್ಯ ರಕ್ತದಾನ ಶಿಬಿರ
ಯಲಹಂಕ ಕೆರೆ – ಜಕ್ಕೂರು ಕೆರೆ (ಬೃಹತ್ ನೀರುಗಾಲುವೆ) ಕಾಮಗಾರಿ – ಪ್ರಸ್ತುತ ನಡೆಯುತ್ತಿರುವ ಬೃಹತ್ ನೀರುಗಾಲುವೆ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಈ ಮಾರ್ಗದಲ್ಲಿರುವ ಭೂಸ್ವಾಧೀನ ಸಮಸ್ಯೆಗಳನ್ನು ತಕ್ಷಣ ಪರಿಹರಿಸಲಾಗುವುದಾಗಿ ತಿಳಿಸಿದರು.
