Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದಸರಾ ಎಂದರೆ ಕೇವಲ ಹಬ್ಬವಲ್ಲ, ಇದು ನಾಡಿನ ನಾಡಿ: ಬಾನು ಮುಷ್ತಾಕ್
  • Uncategorized

ದಸರಾ ಎಂದರೆ ಕೇವಲ ಹಬ್ಬವಲ್ಲ, ಇದು ನಾಡಿನ ನಾಡಿ: ಬಾನು ಮುಷ್ತಾಕ್

Praja Vahini September 22, 2025 1 minute read
WhatsApp Image 2025-09-22 at 11.48.34
Spread the love

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಇಂದು (ಸೋಮವಾರ ಸೆ. 22) ಬಾನು ಮುಸ್ತಾಕ್ ಅವರು ಚಾಲನೆ ನೀಡಿದರು. ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ತಿಳಿಸಿದರು.

ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ ಎಂದರು.

ಸರ್ವ ಜನಾಂಗದ ಶಾಂತಿಯ ತೋಟ’-ಈ ನೆಲದ ಸಂಸ್ಕೃತಿ

ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ , ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ ಎಂದರು. ಇದನ್ನೂ ಓದಿ:  ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ: ಸಿಎಂ

ದಸರಾ- ಶಾಂತಿಯ ಹಬ್ಬ, ಸೌಹಾರ್ದದ ಮೇಳ
ಮೈಸೂರು ದಸರಾ ಘೋಷಣೆಯ ನಮ್ಮೆಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ. ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ, ಇದು ಸರ್ವಜನಾಂಗದ ಶಾಂತಿಯ ತೋಟ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿ, ಪರಸ್ಪರರ ನಂಬಿಕೆಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದರ ಮೂಲಕ ನಮ್ಮ ಬದುಕನ್ನು ಶ್ರೀಮಂತಗೊಳಿಸಬೇಕಿದೆ. ಈ ನೆಲದ ಸುಗಂಧವನ್ನು ಐಕ್ಯತೆಯಾಗಲಿ, ನೆಲದ ಬಿಸಿಲು ಕೂಡ ಸಾಹಾರ್ದತೆಯಿಂದ ಕೂಡಿದೆ. ಈ ನೆಲದ ಬಿಸಿಲು ಕೂಡ ಮಾನವೀಯ ಪ್ರೀತಿಯ ಪ್ರತೀಕವಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ತಾಯಿಯ ಮಹಿಮೆ ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಕವಾಗಿರಲಿ. ತಾಯಿ ಚಾಮುಂಡಿಯ ಸತ್ಯ, ಧೈರ್ಯ ಹಾಗೂ ರಕ್ಷಕತ್ವದ ಸಂಕೇತ. ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಗಳನ್ನು ನಾಶವಾಗಲೆಂದು ಬಯಸುತ್ತೇನೆ. ಈ ದಸರಾ ಹಬ್ಬ ಕೇವಲ ಮೈಸೂರು ನಗರಕ್ಕೆ ಸೀಮಿತವಾಗದೇ, ನಮ್ಮ ನಾಡಿಗೆ ಮಾತ್ರ , ದೇಶಕ್ಕೆ ಮಾತ್ರ ಸೀಮಿತವಾಗದೇ , ಇಡೀ ಜಗಗತ್ತಿನಾದ್ಯಂತ ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ, ಪ್ರೀತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲೆಂದು ಹಾರೈಸುತ್ತೇನೆ. ಇಂದು ಬೆಳೆಗಿಸಿದ ದೀಪ ಈ ಸಂದೇಶದೊಂದಿಗೆ ಇಡೀ ಪ್ರಪಂಚದಾದ್ಯಂತ ತನ್ನ ನೆಲೆಯನ್ನು ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ ಎಂದರು.

ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವುದೇ ಬದುಕಿನ ನಿಜವಾದ ದಾರಿ
ನನ್ನ ಬದುಕು ನನಗೆ ಅನೇಕ ಪಾಠಗಳನ್ನು ಕಲಿಸಿದೆ. ಅದರಲ್ಲಿ ಮುಖ್ಯಪಾಠವೆಂದರೆ, ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ. ನನ್ನ ಧಾರ್ಮಿಕ ನಂಬಿಕೆಗಳು, ನನ್ನ ಜೀವನ ದರ್ಶನ ಎಂದಿಗೂ ಜೀವಪರ. ಅವು ಮರದ ನೆರಳಿನಂತೆ,ತಂಪಾದ ನದಿಯಂತೆ, ಇಂದಿನ ಜಗತ್ತು ಯುದ್ಧದ ಜ್ವಾಲೆಯಲ್ಲಿ ಸುಡುತ್ತಿದೆ. ಇಂದು ಮನುಕುಲವು ದ್ವೇಷ ಮತ್ತು ರಕ್ತಪಾತದಲ್ಲಿ ಮುಳುಗಿರುವಾಗ, ದಸರಾ ಘೋಷಣೆಯು ಎಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ , ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ. ಇದು ಸರ್ವಜನಾಂಗದ ಶಾಂತಿಯ ತೋಟ. ನನ್ನ ಜೀವನದ ದರ್ಶನ ಯಾವತ್ತಿಗೂ ಜೀವಪರ. ಅಸ್ತ್ರಗಳಿಂದಲ್ಲ, ಅಕ್ಷರದಿಂದ ಬದುಕನ್ನು ಗೆಲ್ಲಬಹುದು. ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ: ಸಿಎಂ
Next: ಆರೋಗ್ಯಕರ ಪರಿಸರ ಒದಗಿಸುವುದು ನಮ್ಮ ಬದ್ಧತೆ: ಸತೀಶ್ ರೆಡ್ಡಿ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.