ಬೆಂಗಳೂರು: ಇಷ್ಟು ದಿನ ಯಾವುದೇ ವಿದ್ಯಾಭ್ಯಾಸವನ್ನು ಮಾಡಿದರು ಕೂಡ ಸರಿಯಾದ ಕೆಲಸ ಸಿಗದೆ ಹಾಗೂ ಪ್ರಮುಖವಾಗಿ ವಯೋಮಿತಿಯ ತೊಂದರೆ ಇರುವುದರಿಂದ ಎಷ್ಟೇ ಓದಿದರೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿತ್ತು. ಆದರೆ ಇದೀಗ ರಾಜ್ಯ ಸರ್ಕಾರವು ಉದ್ಯೋಗಾಂಕ್ಷಿಗಳಿಗೆ ದಸರಾ ಹಬ್ಬದ ಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯದಲ್ಲಿರುವ ಎಲ್ಲಾ ವರ್ಗಗಳ ಮೀಸಲಾತಿಯನ್ನು ರಾಜ್ಯ ಸರ್ಕಾರ ಇದೀಗ ಸಡಿಲಿಕೆ ಮಾಡಲು ಮುಂದಾಗಿದೆ ಇದರಿಂದ ಉದ್ಯೋಗಾಕಾಂಕ್ಷಿಗಳಲ್ಲಿ ಮಂದಹಾಸ ಮೂಡಿದೆ.
ಹೌದು, ರಾಜ್ಯ ಸರ್ಕಾರದ ಎಲ್ಲಾ ನೇಮಕಾತಿಗಳಲ್ಲಿ ಎಲ್ಲ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಒಂದು ಬಾರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಹೊಸ ಆದೇಶದಂತೆ, ವಿವಿಧ ಇಲಾಖೆಗಳ ಮೂಲಕ ನಡೆಯುವ ನೇರ ನೇಮಕಾತಿಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಈ ಸಡಿಲಿಕೆ ಅನ್ವಯವಾಗಲಿದೆ. ಇದು ಒಂದು ಬಾರಿಗೆ ಮಾತ್ರ ಅನ್ವಯವಾಗುವಂತೆ ಆದೇಶಿಸಲಾಗಿದೆ.
ಆಯಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 3 ವರ್ಷಗಳ ಸಡಿಲಿಸಲಾಗಿದ್ದು, ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳಂತೆ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಅನ್ವಯವಾಗಲಿದೆ. ಇದನ್ನೂ ಓದಿ: ಮೀಸಲಾತಿ ಹಾಗೂ ಸೌಲಭ್ಯಗಳು ಎಲ್ಲರಿಗೂ ದೊರಕಿಸಲು ಸಮೀಕ್ಷೆ: ಡಿ.ಕೆ.ಸುರೇಶ್
ಈಗ 5 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತೆ ಜನಪ್ರತಿನಿಧಿಗಳು, ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹಾಕಿದ ಪರಿಣಾಮ ಸರ್ಕಾರ ಇದೀಗ 3 ವರ್ಷಗಳ ಸಡಿಲಿಕೆ ಮಾಡಿದೆ. ಈ ವಯೋಮಿತಿ ಸಡಿಲಿಕೆ 2027 ರ ಡಿಸೆಂಬರ್ 31ರೊಳಗೆ ಸರ್ಕಾರ ಹೊರಡಿಸುವ ಎಲ್ಲ ನೇರ ನೇಮಕಾತಿಗಳಿಗೂ ಕೇವಲ ಒಂದು ಬಾರಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೂ ಅನ್ವಯಿಸಲಿದೆ.
ವಯೋಮಿತಿ ಸಡಿಲಿಕೆ ಎಷ್ಟು?
ಸಾಮಾನ್ಯ ವರ್ಗ – 35 ವರ್ಷದಿಂದ 38 ವರ್ಷ
ಒಬಿಸಿ – 38 ವರ್ಷದಿಂದ 41 ವರ್ಷ
ಎಸ್‌ಸಿ/ಎಸ್‌ಟಿ/ಪ್ರವರ್ಗ-1 – 40 ವರ್ಷದಿಂದ 43 ವರ್ಷ
ಶಿಕ್ಷಕರ ನೇಮಕಾತಿ
SC/ST/OBC 42 ಇತ್ತು, 45 ಆಗುತ್ತೆ
ಸಾಮಾನ್ಯ – 40 ಇತ್ತು, 43 ಆಗುತ್ತೆ
SDA/FDA/ಗ್ರೂಪ್ ಸಿ ಹುದ್ದೆ
SC/ST/OBC – 35 ಇತ್ತು, 38 ಆಗುತ್ತೆ
ಸಾಮಾನ್ಯ – 37 ಇತ್ತು, 40 ಆಗುತ್ತೆ
ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ
SC/ST/OBC – 27 ಇತ್ತು, 30 ಆಗುತ್ತೆ
ಸಾಮಾನ್ಯ – 25 ಇತ್ತು, 28 ಆಗುತ್ತೆ
ಪೊಲೀಸ್ ಸಬ್ ಇನ್ಸ್ ಪೆಕ್ಟರ್
SC/ST/OBC – 32 ಇತ್ತು, 35 ಆಗುತ್ತೆ
ಸಾಮಾನ್ಯ – 30 ಇತ್ತು, 33 ಆಗುತ್ತೆ
ಕೆಎಎಸ್
SC/ST/OBC 40 ಇತ್ತು, 43 ಆಗುತ್ತೆ
ಸಾಮಾನ್ಯ 37 ಇತ್ತು, 40 ಆಗುತ್ತೆ
