ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (2023) ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿ ಯೋಜನೆಗಲನ್ನು ಜಾರಿ ಮಾಡಿದ್ದು, ಪಂಚ ಗ್ಯಾರಂಟಿ ಯೋಜನೆಗಲ್ಲಿ ಮಹತ್ವದ ಯೋಜನೆ ಯಾದ ಶಕ್ತಿ ಯೋಜನೆಯು ಈಗಾಗಲೇ ರಾಜ್ಯದಲ್ಲಿರುವ ಮಹಿಳೆಯರ ಮನ ಗೆಲ್ಲುವುದರ ಜೊತೆಗೆ ವಿಶ್ವ ದಾಖಲೆಗೆ ಸೇರ್ಪಡೆಗೊಂಡಿದೆ.
ಹೌದು, ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಅವಾರ್ಡ್ ಗರಿ ಲಭಿಸಿದೆ. 500 ಕೋಟಿ ಮಹಿಳಾ ಉಚಿತ ಪ್ರಯಾಣ ಬೆನ್ನಲ್ಲೇ ಶಕ್ತಿ ಯೋಜನೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ ಆಗಿದೆ. ಈ ಹಿನ್ನೆಲೆ ಮಹಿಳಾ ಪ್ರಯಾಣಿಕರು ಸೇರಿದಂತೆ 4 ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರಿಗೆ ಸಚಿವ ರಾಮಲಿಂಗಾರೆಡ್ಡಿ ಧನ್ಯವಾದ ತಿಳಿಸಿದ್ದಾರೆ.
ಇನ್ನು ಶಕ್ತಿ ಯೋಜನೆ ವಿಶ್ವ ದಾಖಲೆಗೆ ಸೇರ್ಪಡೆ ಬಗ್ಗೆ ಕೆಎಸ್ಆರ್ಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ 2023 ಜೂನ್ 11 ರಂದು ಪ್ರಾರಂಭಿಸಿದ್ದ ಶಕ್ತಿ ಯೋಜನೆ ಅಡಿಯಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ 4 ಸಾರಿಗೆ ಸಂಸ್ಥೆಯಲ್ಲಿ ಉಚಿತವಾಗಿ ಮಹಿಳೆಯರು 500 ಕೋಟಿಗೂ ಹೆಚ್ಚು ಪ್ರಯಾಣ ಮಾಡಿದ್ದಾರೆ. ಇದನ್ನೂ ಓದಿ: ತಿಮರೋಡಿಗೆ ತಾತ್ಕಾಲಿಕ ರಿಲೀಫ್
ಶಕ್ತಿ ಯೋಜನೆ ಈಗಾಗಲೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸೇರ್ಪಡೆಗೊಂಡಿದೆ. ಇತ್ತೀಚೆಗೆ ಸಚಿವ ರಾಮಲಿಂಗಾರೆಡ್ಡಿ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿ ತಮ್ಮ ಸರ್ಕಾರದ ಶಕ್ತಿ ಯೋಜನೆಗೆ ದೊರೆತ ಪ್ರಮಾಣಪತ್ರವನ್ನು ಅವರಿಗೆ ತೋರಿಸಿ ಸಂಭ್ರಮ ಹಂಚಿಕೊಂಡಿದ್ದರು.
