Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿ.ಸೋಮಣ್ಣ ಸಮಸಮಾಜದ ವಿರೋಧಿ: ಸಿಎಂ
  • Politics
  • State
  • ಕೊಪ್ಪಳ

ವಿ.ಸೋಮಣ್ಣ ಸಮಸಮಾಜದ ವಿರೋಧಿ: ಸಿಎಂ

Praja Vahini October 6, 2025
WhatsApp Image 2025-10-06 at 15.34.07
Spread the love

ಕೊಪ್ಪಳ: ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಲಿಂಗಾಯತ ಧರ್ಮದ ವಿಷಯದಲ್ಲಿ ಜನರ ನಿಲುವೇ ನನ್ನ ನಿಲುವು

ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಇದು ಒಳ್ಳೆಯ ಬೆಳವಣಿಗೆ. ಸಮಾಜದಲ್ಲಿ ಬದಲಾವಣೆಯನ್ನು ವಿರೋಧಿಸುವವರು ಸಮೀಕ್ಷೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಲಿಂಗಾಯತ ಧರ್ಮದ ವಿಷಯದಲ್ಲಿ ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು. ಇದನ್ನೂ ಓದಿ: ಆಂಧ್ರ ಮತ್ತು ಕರ್ನಾಟಕದ ಸಂಬಂಧ ಪರಸ್ಪರ ಗೌರವದಿಂದ ಕೂಡಿದೆ: ಪವನ್ ಕಲ್ಯಾಣ್

ಕೆಮ್ಮಿನ ಔಷಧಗಳ ಮೇಲೆ ನಿಗಾ ಇಟ್ಟಿದ್ದೇವೆ

ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಈಗಾಗಲೇ ರಾಜ್ಯದಲ್ಲಿ ಲಭ್ಯವಿರುವ ಕೆಮ್ಮಿನ ಔಷಧಗಳ ಪರೀಕ್ಷೆಯನ್ನು ಇಲಾಖೆ ನಡೆಸಿದ್ದು, ಅಪಾಯಕಾರಿ ಅಂಶ ಪತ್ತೆಯಾದರೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಆಂಧ್ರ ಮತ್ತು ಕರ್ನಾಟಕದ ಸಂಬಂಧ ಪರಸ್ಪರ ಗೌರವದಿಂದ ಕೂಡಿದೆ: ಪವನ್ ಕಲ್ಯಾಣ್
Next: ನಟಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನಕಲಿ ನಿರ್ಮಾಪಕ ಅರೆಸ್ಟ್

Views:

65

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.