ಬೆಂಗಳೂರು: ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು. ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಬೀಗ: ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಸದಾಶಿವನಗರದ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಪ್ರತಿಕ್ರಿಯೆ ನೀಡಿದ ಅವರು, ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದಲ್ಲಿ ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದರು.
