ಬೆಂಗಳೂರು: ರಾಮನಗರ ಜಿಲ್ಲೆ ಬಿಡದಿ ನಗರದಲ್ಲಿರುವ ಜಾಲಿವುಡ್ ನಲ್ಲಿ ಕನ್ನಡ ಬಿಗ್ ಬಾಸ್ 12 ಶೋ ನಡೆಯುತ್ತಿದ್ದು, ಪರಿಸರ ನಿಯಮ ಉಲ್ಲಂಘನೆ ಮಾಡಿರುವುದರಿಂದ ಜಾಲಿವುಡ್ ಹಾಗೂ ಬಿಗ್ ಬಾಸ್ ಮನೆ ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೂ ಬೀಗ ಹಾಕಲಾಗಿದೆ..
ಸುಮಾರು 5 ಕೋಟಿಗೂ ಅಧಿಕ ಹಣ ಖರ್ಚು ಮಾಡಿ ಮನೆ ನಿರ್ಮಾಣ ಮಾಡಿ ಈಗಷ್ಟೇ ಪ್ರಾರಂಭವಾಗಿರುವ ಕನ್ನಡ ಬಿಗ್ ಬಾಸ್ ಸೀಸನ್ 12ಕ್ಕೆ ಆರಂಭದಲ್ಲೇ ಕಂಟಕ ಎದುರಾಗಿದೆ.
ಇನ್ನು ಬಿಗ್ ಬಾಸ್ ಮನೆಗೆ ಬೀಗ ಹಾಕಿಸಲು ಪ್ರಮುಖ ಕಾರಣವೇ ಡಿಕೆ ಶಿವಕುಮಾರ್ ರೆಂದು ಜೆಡಿಎಸ್ ಟ್ವೀಟ್ ಮಾಡಿದೆ. ಇದನ್ನೂ ಓದಿ: ಬಿಗ್ಬಾಸ್ 12ಕ್ಕೆ ಬಿಗ್ ರಿಲೀಫ್
ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಜೆಡಿಎಸ್, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್ ಬಾಸ್ ರಿಯಾಲಿಟಿ ಷೋ ಬಂದ್ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್ ಮಿನಿಸ್ಟರ್ ಎಂದು ಬರೆದುಕೊಂಡಿದೆ.
