Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಗ್ ಬಾಸ್ 12 ರೀ ಓಪನ್
  • Bangalore
  • Cinema
  • Politics

ಬಿಗ್ ಬಾಸ್ 12 ರೀ ಓಪನ್

Praja Vahini October 9, 2025 1 minute read
WhatsApp Image 2025-10-08 at 11.42.39
Spread the love

ರಾಮನಗರ: ಬಾಲಿವುಡ್ ಸ್ಟುಡಿಯೋ ನಲ್ಲಿ ನಡೆಯುತ್ತಿದ್ದ ಕನ್ನಡ ಬಿಗ್ ಬಾಸ್ ಸೀಸನ್ 12 ತಾತ್ಕಾಲಿಕವಾಗಿ ಅಕ್ಟೋಬರ್ 7ರಂದು ಬಂದ್ ಮಾಡಲಾಗಿದ್ದು, ಮತ್ತೆ ಇಂದಿನಿಂದ (ಗುರುವಾರ ಅಕ್ಟೋಬರ್ 09) ಎಂದಿನಂತೆ ಬಿಗ್ ಬಾಸ್ ಪ್ರಾರಂಭವಾಗಲಿದೆ ಎಂದು ತಿಳಿದುಬಂದಿದೆ.

ಹೌದು, ಜಾಲಿವುಡ್ ಸ್ಟುಡಿಯೋಗೆ ಪರಿಸರ ಮಾಲಿನ್ಯ ಅಧಿಕಾರಿಗಳು ಅದೆಷ್ಟೋ ಸಾರಿ ನೋಟಿಸ್ ನೀಡಿದ್ದರು ಕೂಡ ಅದನ್ನು ಲೆಕ್ಕಿಸದೆ ಸ್ಟುಡಿಯೋವನ್ನು ಆರಂಭಿಸಿತು. ಎರಡು ಬಾರಿ ನೋಟಿಸ್ ನೀಡಿದ್ದರು ಅದನ್ನು ಪರಿಗಣಿಸದೆ ಇರುವುದರಿಂದ ಅಕ್ಟೋಬರ್ 7ರಂದು ಬಿಗ್ ಬಾಸ್ ಮನೆ ಸೇರಿದಂತೆ ಇಡೀ ಜಾಲಿವುಡ್ ಸ್ಟುಡಿಯೋಗೆ ಕಂದಾಯ ಅಧಿಕಾರಿಗಳು ಹಾಗೂ ಪರಿಸರ ಮಾಲಿನ್ಯ ಅಧಿಕಾರಿಗಳು ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದಿದ್ದರು.

ಇನ್ನು ನಿನ್ನೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆದೇಶ ನೀಡುತ್ತಿರುವ ಬೆನ್ನಲ್ಲೇ ಇಂದು (ಅಕ್ಟೋಬರ್ 9)ರಂದು ನೆಸುಕಿನ ಜಾವ 2:45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್‌ಪಿ ಶ್ರೀನಿವಾಸ್ ಗೌಡ, ತಹಶಿಲ್ದಾರ್ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಜಾಲಿವುಡ್‌ ಸ್ಟುಡಿಯೋದ ಗೇಟ್‌ ಸೀಲ್‌ ಓಪನ್‌ ಮಾಡಿದ್ದಾರೆ.

ಗೇಟ್ ಓಪನ್ ಮಾಡಿ ನಂತರ ಪ್ರತಿಕ್ರಿಯಿಸಿದ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಯಶವಂತ್ ವಿ ಗುರುಕರ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ತೆರೆದಿದ್ದೇವೆ. ಜಾಲಿವುಡ್‌ ಸಂಪೂರ್ಣ ಕಾರ್ಯಾಚರಣೆ ನಡೆಸಲು ಅವಕಾಶ ನೀಡಿಲ್ಲ. ಕೇವಲ ಬಿಗ್ ಬಾಸ್ ಶೋ ಸ್ಪರ್ಧಿಗಳು, ಸಿಬ್ಬಂದಿ ಓಡಾಟ ಹಾಗೂ ಅಗತ್ಯ ವಸ್ತುಗಳ ಬಳಕೆಗೆ ಅವಕಾಶ ಕೊಡಲಾಗಿದೆ. ಬಿಗ್ ಬಾಸ್ ಶೂಟಿಂಗ್ ಆರಂಭದ ಬಗ್ಗೆ ನಾಳೆ ತೀರ್ಮಾನ ಆಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಗ್‌ಬಾಸ್‌ 12ಕ್ಕೆ ಬಿಗ್‌ ರಿಲೀಫ್‌

ಸದ್ಯಕ್ಕೆ ಬಿಗ್‌ಬಾಸ್‌ ಶೋ ನಡೆಯುವ ಜಾಗ ಮಾತ್ರ ತೆರೆಯಲಾಗಿದೆ. ಸರ್ಕಾರದಿಂದ ಅನುಮತಿ ಸಿಕ್ಕಿದ ಹಿನ್ನೆಲೆಯಲ್ಲಿ ರಾತ್ರೋ ರಾತ್ರಿ ಬಿಗ್‌ ಬಾಸ್‌ ಸಿಬ್ಬಂದಿ ಕ್ಯಾಬ್‌ ಮೂಲಕ ಆಗಮಿಸಿದ್ದಾರೆ. ಇದರ ಜೊತೆ ಬಿಡದಿಯ ರೆಸಾರ್ಟ್‌ನಲ್ಲಿರುವ ಸ್ಪರ್ಧಿಗಳು ಮನೆಗೆ ಬಂದಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಸಿಗರೇಟ್ ಸೇದುತ್ತಾ ರಿಲ್ಯಾಕ್ಸ್ ಮೂಡ್‌ಗೆ ಜಾರಿದ BBK12 ಸ್ಪರ್ಧಿಗಳು
Next: ಬಿಗ್ ಬಾಸ್ ರೀ ಓಪನ್ ಗೆ ಕಿಚ್ಚನ ಕಸರತ್ತೆನು?

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.