ಚಿಕ್ಕಮಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಬಾಳಿ ಜೋರಾಗಿ ಬೀಸುತ್ತಿರುವ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿನ್ನರ್ ಮೀಟಿಂಗ್ ಕರೆದಿರುವುದು ಎಲ್ಲರಲ್ಲಿ ಚರ್ಚೆಗೆ ಕಾರಣವಾಗಿದೆ.
ಇನ್ನು ಸಿಎಂ ಮೀಟಿಂಗ್ ಕರೆದಿರುವುದನ್ನು ವಿರೋಧ ಪಕ್ಷದ ನಾಯಕರುಗಳು ವಿಭಿನ್ನವಾಗಿ ಟೀಕಿಸುತ್ತಿದ್ದಾರೆ. ಸಿಎಂ ಡಿನ್ನರ್ ಮೀಟಿಂಗ್ ಕುರಿತಾಗಿ ಸಿಟಿ ರವಿ ಪ್ರತಿಕ್ರಿಯಿಸಿದ್ದಾರೆ.
ಚಿಕ್ಕಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ 80% ದಾಟಿದೆ ಅಂತ ಗುತ್ತಿಗೆದಾರರು ಪ್ರೇಮಪತ್ರ ಬರೆದಿದ್ದಾರೆ. ರಾಜ್ಯದಲ್ಲಿ 10 ಜಿಲ್ಲೆಗಳು ಅತಿವೃಷ್ಠಿಯಿಂದ ಕಂಗೆಟ್ಟು ಹೋಗಿವೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆಯಲ್ಲಿ ನಾವು 2ನೇ ಸ್ಥಾನದಲ್ಲಿದ್ದೇವೆ. ಇದನ್ನೆಲ್ಲಾ ಸಂಭ್ರಮಾಚರಣೆ ಮಾಡಬೇಕಲ್ವಾ ಅದಕ್ಕೆ ಔತಣಕೂಟ ಆಯೋಜಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಕಾಂಗ್ರೆಸ್‌ನಲ್ಲಿ ಮೆರಿಟ್ ಅಂದ್ರೆ ಅಕ್ರಮ ಹಣ ಸಂಪಾದನೆಯಾಗಿದೆ. ಭ್ರಷ್ಟಾಚಾರರಿಗಳಿಗೆ, ಕಾಳಸಂತೆಕೋರರಿಗೆ ಕಾಂಗ್ರೆಸ್ ಮಣೆ ಹಾಕುತ್ತಾ ಬಂದಿದೆ. 60ರ ದಶಕದಿಂದಲೂ ಕಾಂಗ್ರೆಸ್ ಕಾಳಸಂತೆಕೋರರಿಗೆ ಪ್ರೋತ್ಸಾಹ ಮಾಡಿದೆ. ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗೆಲ್ಲಾ ಕಾಳಸಂತೆಯ ಪ್ರಮಾಣ ಹೆಚ್ಚು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಇದೇ ಕೊನೆ ಕಾಂಗ್ರೆಸ್ ನ ಅವಧಿ, ಇದೇ ಕೊನೆ: ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ
ಯಾವ ಮೂಲದಿಂದ ಬೇಕಾದರೂ ಹಣ ಮಾಡಲಿ, ಒಟ್ಟು ಹಣ ಮಾಡಿದ್ದರೆ ಕಾಂಗ್ರೆಸ್ ಅವರಿಗೆ ಮಣೆ ಹಾಕುತ್ತೆ. ಇದು ಕಾಂಗ್ರೆಸ್‌ನಲ್ಲಿರುವ ವ್ಯವಸ್ಥೆ. ಕಾಂಗ್ರೆಸ್‌ನಲ್ಲಿ ಮೆರಿಟ್ ಅಂದ್ರೆ ಅಕ್ರಮ ಹಣ ಸಂಪಾದನೆ. ಅನುಮಾನವಿದ್ದರೆ 40 ಜನರ ಟ್ರ್ಯಾಕ್ ರೆಕಾರ್ಡ್ ನೋಡಿ ನಿಮಗೆ ಅರ್ಥವಾಗುತ್ತೆ ಎಂದಿದ್ದಾರೆ.
