Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಮರ್ಪಕ‌ ಅಭಿವೃದ್ಧಿಗಾಗಿ GBA ಅಸ್ತಿತ್ವಕ್ಕೆ: ಸಿಎಂ
  • Bangalore
  • Politics
  • State

ಸಮರ್ಪಕ‌ ಅಭಿವೃದ್ಧಿಗಾಗಿ GBA ಅಸ್ತಿತ್ವಕ್ಕೆ: ಸಿಎಂ

Praja Vahini October 10, 2025 1 minute read
WhatsApp Image 2025-10-10 at 17.25.31
Spread the love

ಬೆಂಗಳೂರು: ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ  ಅಸ್ತಿತ್ವಕ್ಕೆ ಬಂದು ಐದು ಕಾರ್ಪೋರೇಷನ್ ಗಳು ರಚನೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ತಲುಪಿದೆ. ಒಂದು ಕಾರ್ಪೋರೇಷನ್ ನಿಂದ ಇಷ್ಟು ದೊಡ್ಡ ನಗರದ ಸಮರ್ಪಕ ಅಭಿವೃದ್ಧಿ ಬಹಳ ದೊಡ್ಡ ಸವಾಲಿನದ್ದು, ಈ ಚರ್ಚೆ ಹಲವು ವರ್ಷಗಳಿಂದ ಇದ್ದೇ ಇದೆ. ಒಂದಕ್ಕಿಂತ ಹೆಚ್ಚು ಕಾರ್ಪೋರೇಷನ್ ಗಳಿದ್ದರೆ ಅಭಿವೃದ್ಧಿ ಸಾಧ್ಯ ಎನ್ನುವ ಕಾರಣಕ್ಕೆ ಈ ಬಗ್ಗೆ ವರದಿ ಕೊಡಲು ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗಲೇ ಸಮಿತಿ ರಚಿಸಲಾಗಿತ್ತು. ನಂತರ ಬಂದ ಸರ್ಕಾರಗಳು ಈ ದಿಕ್ಕಿನಲ್ಲಿ ಗಮನ ಹರಿಸಲೇ ಇಲ್ಲ. ಹೀಗಾಗಿ ನಮ್ಮ ಸರ್ಕಾರವೇ ಪುನಃ ಅಧಿಕಾರಕ್ಕೆ ಬಂದ ಬಳಿಕ ಸಮಿತಿಯನ್ನು ಪುನರ್ ರಚಿಸಲಾಯಿತು. ಈ ಸಮಿತಿ ವರದಿಯಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು 5 ನಗರ ಪಾಲಿಕೆಗಳ ರಚನೆಯಾಗಿವೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಮೆರಿಟ್ ಅಂದ್ರೆ ಅಕ್ರಮ ಹಣ ಸಂಪಾದನೆ: ಸಿ.ಟಿ ರವಿ  

ಸುಗಮ ಕಸ ವಿಲೇವಾರಿ ಆಗಬೇಕು. ಪಾಲಿಕೆಗಳ ಆದಾಯ ಹೆಚ್ಚಳ ಆಗಬೇಕು. ಟ್ರಾಫಿಕ್ ದಟ್ಟಣೆ ನಿವಾರಣೆ ಆಗಬೇಕು. ನಗರವನ್ನು ಚೊಕ್ಕವಾಗಿಡಬೇಕು. ರಸ್ತೆ/ಚರಂಡಿ/ಫುಟ್ಪಾತ್/ಪಾರ್ಕ್ಗಳ ನಿರ್ಮಾಣಕ್ಕೆ ಆದ್ಯತೆ ನೀಡಿ ಮಾದರಿ ಪಾಲಿಕೆಗಳನ್ನಾಗಿ ರೂಪಿಸಬೇಕು ಎನ್ನುವ ಮಹತ್ತರ ಗುರಿ ಮತ್ತು ಉದ್ದೇಶಳನ್ನು ಇಟ್ಟುಕೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯ ನಿರ್ವಹಿಸಬೇಕು ಎಂದು ಸಿ.ಎಂ ಸೂಚನೆ ನೀಡಿದರು.

ನಾವು ನಿರೀಕ್ಷೆ ಮಾಡಿರುವ ಈ ಗುರಿ ಮತ್ತು ಉದ್ದೇಶ ನೆರವೇರಲು BWSSB, BDA, BESCOM ಸೇರಿ ಎಲ್ಲಾ ಇಲಾಖೆಗಳು GBA ಜೊತೆ ಪರಸ್ಪರ ಸಹಕಾರ ಸಹಯೋಗವನ್ನು  ಅತ್ಯಂತ ಕಡ್ಡಾಯವಾಗಿ ಆಚರಣೆಗೆ ತರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು.

 

About the Author

Praja Vahini

Editor

View All Posts

Spread the love

Post navigation

Previous: ಕಾಂಗ್ರೆಸ್ ಮೆರಿಟ್ ಅಂದ್ರೆ ಅಕ್ರಮ ಹಣ ಸಂಪಾದನೆ: ಸಿ.ಟಿ ರವಿ  
Next: ಪತ್ರಕರ್ತ ಚಿಕಿತ್ಸೆಗೆ ಜಿಬಿಎದಲ್ಲೂ ಅನುದಾನ: ಡಿಕೆಶಿ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.