ಬೆಂಗಳೂರು: ಇಂದಿನ ದಿನಗಳಲ್ಲಿ ತಂತ್ರಜ್ಞಾನ ಬಹಳ ಮುಂದುವರೆದಿದೆ ಹಾಗಾಗಿ ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದು ತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ಹಾಕುವುದಕ್ಕೆ ಈ ವಿಧಾನ ಬಳಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ನಗರದಲ್ಲಿ ಇಂದು ಶನಿವಾರ ಅಕ್ಟೋಬರ್ 11ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಗರದಾದ್ಯಂತ ರಾತ್ರಿಯೆಲ್ಲಾ ಜೋರಾಗಿ ಮಳೆ ಸುರಿದಿದೆ. ನಮ್ಮ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಿದ್ದಾರೆ, ಮಾಡುತ್ತಿದ್ದಾರೆ. ಎಲ್ಲಿಯೂ ಅವಘಡಗಳು ನಡೆದ ಸುದ್ದಿಗಳು ವರದಿಯಾಗಿಲ್ಲ. ಒಂದಷ್ಟು ಕಡೆ ಮಾತ್ರ ನೀರಿನ ಹರಿವಿಗೆ ಅಡಚಣೆ ಉಂಟಾಗಿದೆ ಎಂದರು. ಇದನ್ನೂ ಓದಿ: ಜನಸಾಮಾನ್ಯರ ಜತೆ ಹೆಜ್ಜೆಹಾಕಿದ ಡಿಕೆಶಿ
ಒಂದು ವಾರಗಳ ಹಿಂದೆ ಮುಚ್ಚಿದ್ದ ರಸ್ತೆಗುಂಡಿಗಳು ಮಳೆಗೆ ಮತ್ತೆ ಹಾಳಾಗುತ್ತಿರುವುದು ಸಾಮಾನ್ಯ. ಯಾವುದೇ ಸಂದರ್ಭದಲ್ಲಿ ಮಳೆ ಬಂದಾಗ ಈ ರೀತಿ ತೊಂದರೆಯಾಗುತ್ತದೆ, ಸಮಸ್ಯೆ ಬಗೆ ಹರಿಸಲಾಗುವುದು ಎಂದರು.
