Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ : ಸಿಎಂ
  • Politics
  • State
  • ಬಾಗಲಕೋಟೆ

ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ : ಸಿಎಂ

Praja Vahini October 13, 2025 1 minute read
WhatsApp Image 2025-10-13 at 17.15.07
Spread the love

ಬಾಗಲಕೋಟೆ: ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ ಖರ್ಗೆಯವರು ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಲು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆರ್ ಎಸ್ ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಪತ್ರ ಬರೆದಿದ್ದಾರೆ ಎಂದರು.

ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಸಂಬಂಧವಿಲ್ಲ

ರಾಜ್ಯದಲ್ಲಿ ಬದಲಾವಣೆಯಲ್ಲಿ ಹೈಕಮಾಂಡ್ ನವರ ನಿರ್ಧಾರವೇ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪಕ್ಷದ ವರಿಷ್ಠರ ಮತ್ತು ಶಾಸಕರ ಅಭಿಪ್ರಾಯ ಬಹಳ ಮುಖ್ಯ. ಶಾಸಕರ ಒಮ್ಮತ ಹಾಗೂ ಹೈಕಮಾಂಡ್ ನ ಆರ್ಶೀವಾದವಿರಬೇಕು.  ಇಂದಿನ ಭೋಜನಕೂಟ ಕಾರ್ಯಕ್ರಮದಲ್ಲಿ ಯಾವುದೇ ವಿಶೇಷತೆ ಇಲ್ಲ. ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಯಾವುದೇ ಸಂಬಂಧವಿಲ್ಲ. ನವೆಂಬರ್ ತಿಂಗಳಲ್ಲಿ ಯಾವುದೇ ಕ್ರಾಂತಿಯೂ ಇಲ್ಲ ಎಂದರು. ಇದನ್ನೂ ಓದಿ: ದೇವೇಗೌಡರು ಕರುನಾಡಿನ ಹೆಮ್ಮೆ: ಸತೀಶ್ ರೆಡ್ಡಿ

ನನಗೆ ಮಾಟಮಂತ್ರಗಳಲ್ಲಿ ನಂಬಿಕೆಯಿಲ್ಲ

ಶಾಸಕ ಮುನಿರತ್ನ ಮತ್ತು ಡಿಕೆ ಶಿವಕುಮಾರ್ ಅವರ ನಡೆದ ಮಾತುಕತೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಸಿಎಂ ಡಿ ಕೆ ಶಿವಕುಮಾರ್ ರವರು ನಿನ್ನೆ ಬೆಂಗಳೂರು ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಲಾಲ್ಬಾಗ್  ನಂತೆ ಮತ್ತಿಕರೆಯ ಜೆ ಪಿಪಾರ್ಕ್ ದಲ್ಲಿಯೂ ಕಾರ್ಯಕ್ರಮವಿತ್ತು. ಶಾಸಕ ಮುನಿರತ್ನರವರು ವೇದಿಕೆಗೆ ಆಗಮಿಸಿ, ತಮ್ಮ ಅಭಿಪ್ರಾಯವನ್ನು ನೀಡಬಹುದಾಗಿತ್ತು. ಆದರೆ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಲಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನವಿತ್ತೇ ಇಲ್ಲವೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ . ನಾನು  ಯಾವುದೇ ಮಾಟಮಂತ್ರಗಳಲ್ಲಿ ನಂಬಿಕೆಯಿರಿಸಿಲ್ಲ ಎಂದರು.

 

 

 

About the Author

Praja Vahini

Editor

View All Posts

Spread the love

Post navigation

Previous: ದೇವೇಗೌಡರು ಕರುನಾಡಿನ ಹೆಮ್ಮೆ: ಸತೀಶ್ ರೆಡ್ಡಿ
Next: ಕರ್ಮ ಯಾರನ್ನು ಬಿಡೋದಿಲ್ಲ: ನಿಖಿಲ್ ಕುಮಾರಸ್ವಾಮಿ

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.