ಬೆಂಗಳೂರು: ಕನ್ನಡ ಚಿತ್ರರಂಗದ ದಿ. ನಟ ಪುನೀತ್ ರಾಜಕುಮಾರ್ ಅವರು ಈಗಾಗಲೇ ನಮ್ಮನ್ನೆಲ್ಲ ಅಗಲಿ ಹಲವಾರು ವರ್ಷಗಳ ಕಳೆದರೂ ಕೂಡ ಅವರ ಪ್ರೀತಿ, ನೆನಪು ಮಾತ್ರ ಎಲ್ಲರಲ್ಲೂ ಹಚ್ಚ ಹಸಿರಾಗಿ ಎಲ್ಲರಲ್ಲೂ ಉಳಿದಿದೆ.
ಇನ್ನು ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಪ್ರತಿಭೆ, ಸಮಾಜಸೇವೆ, ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರಿಗೂ ತಲುಪಿಸಲು ಹಾಗೂ ಸ್ಫೂರ್ತಿ ತುಂಬಲು PRK ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಸಿದ್ಧಪಡಿಸಲಾಗಿದ್ದು, ಮೊಬೈಲ್ ಅಪ್ಲಿಕೇಶನ್ ಲಾಂಚ್ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನ ಆಗಮಿಸುವಂತೆ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಆಮಂತ್ರಣ ನೀಡಿ ಸ್ವಾಗತಿಸಿದದ್ದಾರೆ. ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರ ಮನೆಗೆ ಭೇಟಿ ನೀಡಿ ಆಮಂತ್ರಣ ನೀಡಿ ಆಹ್ವಾನಿಸಿದ್ದಾರೆ. ಇದನ್ನೂ ಓದಿ: ಕರ್ಮ ಯಾರನ್ನು ಬಿಡೋದಿಲ್ಲ: ನಿಖಿಲ್ ಕುಮಾರಸ್ವಾಮಿ
