Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಲ್ಡರ್ ನಿಂದ ಕಿರುತೆರೆ ನಟ ನಟಿಯರಿಗೆ ಮಹಾ ವಂಚನೆ!
  • Bangalore
  • Cinema
  • Crime
  • State

ಬಿಲ್ಡರ್ ನಿಂದ ಕಿರುತೆರೆ ನಟ ನಟಿಯರಿಗೆ ಮಹಾ ವಂಚನೆ!

Praja Vahini October 14, 2025 1 minute read
WhatsApp Image 2025-10-14 at 10.56.08
Spread the love

ಬೆಂಗಳೂರು: ಬೆಂಗಳೂರು ನಗರದಲ್ಲಿ ಇತ್ತೀಚಿಗೆ ವಂಚನೆಯ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಇದೀಗ ಕಿರುತೆರೆ ನಟ ನಟಿಯರು ಕೂಡ ವಂಚನೆಗೆ ಒಳಗಾಗಿದ್ದಾರೆ.

ಹೌದು, ಕಿರುತೆರೆ ನಟ ನಟಿಯರಿಗೆ ಸೈಟು ಕೊಡಿಸುವುದಾಗಿ ಲಕ್ಷ ಲೂಟಿ ಹೊಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್‌ನ 139 ಸದಸ್ಯರಿಗೆ ಸೈಟು ಕೊಡಿಸುವುದಾಗಿ ಕಿಡಿಗೇಡಿಗಳು ವಂಚನೆ ಮಾಡಿದ್ದಾರೆ.

ಒಟ್ಟು 139 ಜನರಿಂದ ಲಕ್ಷ ಲಕ್ಷ ಹಣ ಪಡೆದು ಸೈಟ್‌ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದ್ದು, ಬಿಲ್ಡರ್‌ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಈ ಕುರಿತು ಅಸೋಸಿಯೇಷನ್ ಸದಸ್ಯೆ ಭಾವನಾ ಬೆಳಗೆರೆ ಅವರು ನೀಡಿದ ದೂರಿನ ಮೇರೆಗೆ ಬಿಲ್ಡರ್ ಭಗೀರಥ, ಸಂಜೀವ್ ತಗಡೂರು, ಗುರುಪ್ರಸಾದ್, ರವೀಂದ್ರ, ಉಮಾಕಾಂತ್ ಎಂಬುವವರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ದಲಿತರು ಎನ್ನಿಸಿಕೊಳ್ಳಲೂ ಯೋಗ್ಯರಲ್ಲ – ಛಲವಾದಿ ನಾರಾಯಣಸ್ವಾಮಿ

ಕೆಟಿವಿಎನಲ್ಲಿ ಸೈಟ್‌ ಕಮಿಟಿ ಸದಸ್ಯನಾಗಿದ್ದ ಸಂಜೀವ್‌ ತಗಡೂರು, ಸದಸ್ಯರಿಗೆ ಸೈಟ್‌ ಕೊಡಿಸುವುದಾಗಿ ಬಿಲ್ಡರ್‌ ಜೊತೆಗೆ ವ್ಯವಹಾರ ಕುದುರಿಸಿದ್ದ. ತಾವರೆಕೆರೆ ಬಳಿ ಸೈಟ್‌ ಕೊಡಿಸುವುದಾಗಿ ಹೇಳಿ ಅಸೋಸಿಯೇಷನ್‌ ಸದಸ್ಯರಿಂದ ಲಕ್ಷ ಲಕ್ಷ ಹಣ ಪಡೆದಿದ್ದ. ಆರ್.ಆರ್ ನಗರ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಶುದ್ಧ ಕ್ರಯ ಸಹ ಮಾಡಿಸಲಾಗಿತ್ತು. ಆ ಬಳಿಕ ಖಾತೆ ಮಾಡಿಸಲು ಮೀನಮೇಷ ಎಣಿಸುತ್ತಿದ್ದ. ಈ ವೇಳೆ ಕೆಲ ಸದಸ್ಯರು ಖುದ್ಧಾಗಿ ಖಾತೆ ಮಾಡಿಸಲು ತೆರಳಿದಾಗ ತಾವು ವಂಚನೆಗೆ ಒಳಗಾಗಿರುವುದು ಬೆಳಕಿಗೆ ಬಂದಿದೆ.

 

About the Author

Praja Vahini

Editor

View All Posts

Spread the love

Post navigation

Previous: ಪ್ರಿಯಾಂಕ್ ಖರ್ಗೆ ದಲಿತರು ಎನ್ನಿಸಿಕೊಳ್ಳಲೂ ಯೋಗ್ಯರಲ್ಲ – ಛಲವಾದಿ ನಾರಾಯಣಸ್ವಾಮಿ
Next: ರಾಜು ತಾಳಿಕೋಟಿ ನಿಧನಕ್ಕೆ ಕಂಬನಿ ಮಿಡಿದ ಚಿತ್ರರಂಗ

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.