ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಮಪ್ಪ ಎಂ ರವರು ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಮುದಾಯದ ಬಡವರಿಗೆ ಸರ್ಕಾರದ ಸೌಲಭ್ಯಗಳನ್ನು ಬೋವಿ ಅಭಿವೃದ್ಧಿ ನಿಗಮದ ವತಿಯಿಂದ ನೇರವಾಗಿ ತಲುಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.
ಸರ್ಕಾರ ನಿಯೋಜಿಸಿರುವ ವಿವಿಧ ಯೋಜನೆಗಳನ್ನ ಪರಿಶೀಲಿಸಿ ಅಗತ್ಯವಿದ್ದರೆ ಮಾನ್ಯ ಸಚಿವರು ಹಾಗೂ ಮುಖ್ಯಮಂತ್ರಿಗಳ ಜೊತೆ ಸಂಪರ್ಕಿಸಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಪ್ರಯತ್ನಿಸುತ್ತೇನೆ ಎಂದರು. ಇದನ್ನೂ ಓದಿ: ಅನ್ನ ತಿನ್ನುವ ಹಕ್ಕಿದೆ, ಬಿಸಾಡುವ ಹಕ್ಕಿಲ್ಲ: ಕೆಹೆಚ್. ಮುನಿಯಪ್ಪ
ಈ ಕಾರ್ಯಕ್ರಮದಲ್ಲಿ ಬೋವಿಮಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಚಂದ್ರನಾಯಕ್, ವ್ಯವಸ್ಥಾಪಕರಾದ ಶಿವ ಸ್ವಾಮಿ ಹಾಗೂ ಇನ್ನಿತರ ಸಿಬ್ಬಂದಿಗಳು ಹಾಜರಿದ್ದು, ನೂತನ ಅಧ್ಯಕ್ಷರಿಗೆ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು.
