ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಂಚಾರಿ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರ ಮೇಲೆ ದರ್ಪ ತೋರುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ದೊಡ್ಡ ಉದಾಹರಣೆ ಎಂಬಂತೆ ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಸಾರ್ವಜನಿಕನಿಗೆ ಸಂಚಾರಿ ಪೊಲೀಸ್ ಅಧಿಕಾರಿ ಕಪಾಳಮೋಕ್ಷ ಮಾಡಿರೋದು ಇದೀಗ ಎಲ್ಲೆಡೆ ಬಾರಿ ಚರ್ಚೆಯಾಗುತ್ತಿದೆ.
ಹೌದು, ಬೈಕ್ ಸವಾರನಿಗೆ ಸಂಚಾರಿ ಪೊಲೀಸ್ ಅಧಿಕಾರಿ ಒಬ್ಬರು ಕಪಾಳಮೋಕ್ಷ ಮಾಡಿರುವ ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.
ಸಾರ್ವಜನಿಕರ ಮುಂದೆ ಪೊಲೀಸ್ ಅಧಿಕಾರಿ ಬೈಕ್ ಸವಾರನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಧಿಕಾರ ದುರುಪಯೋಗದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: 500 ಟನ್ ಹಸಿ ಕಸ ಗ್ಯಾಸ್ ಆಗಿ ಪರಿವರ್ತನೆ: ಡಿಕೆಶಿ
ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಂಚಾರಿ ಡಿಸಿಪಿ, ಸವಾರನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಬೈಕ್ ಸವಾರನಿಗೆ ಕಪಾಳಮೋಕ್ಷ ಮಾಡಿದ್ದ ಸಂಚಾರಿ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.
