Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ಕಾರದ ಬೇಜವಾಬ್ದಾರಿತನದಿಂದ ಪ್ರತಿಷ್ಠಿತ ಕಂಪನಿ ಕೈತಪ್ಪಿದೆ: ಬೊಮ್ಮಾಯಿ
  • Politics
  • State
  • ಹಾವೇರಿ

ಸರ್ಕಾರದ ಬೇಜವಾಬ್ದಾರಿತನದಿಂದ ಪ್ರತಿಷ್ಠಿತ ಕಂಪನಿ ಕೈತಪ್ಪಿದೆ: ಬೊಮ್ಮಾಯಿ

Praja Vahini October 17, 2025 1 minute read
WhatsApp Image 2025-10-17 at 17.38.40
Spread the love

ಹಾವೇರಿ: ರಾಜ್ಯ ಸರ್ಕಾರದ ಬೇಜವಾಬ್ದಾರಿ ತನದಿಂದ ಪ್ರತಿಷ್ಠಿತ ಗೂಗಲ್ ಕಂಪನಿ ನಮ್ಮ ರಾಜ್ಯಬಿಟ್ಟು ಆಂಧ್ರಪ್ರದೇಶಕ್ಕೆ ಹೋಗುವಂತಾಗಿದೆ. ಸರ್ಕಾರ ಪ್ರಗತಿಪರವಾಗಿದ್ದರೆ ನಮ್ಮ ರಾಜ್ಯ ಬಿಟ್ಟು ಯೋಜನೆಗಳು ಹೋಗುವುದಿಲ್ಲ. ಈಗಿನ ಸರ್ಕಾರ ನೀವು ಹೋಗುವುದಿದ್ದರೆ ಹೋಗಿ ಅಂತ ಬೇಜವಾಬ್ದಾರಿ ತೋರುತ್ತಿರುವುದರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಷ್ಠಿತ ಸಂಸ್ಥೆ ಅಮೇರಿಕಾದ ಹೊರಗಡೆ 1.23 ಲಕ್ಷ ಕೋಟಿ ಬಂಡವಾಳ ಹೂಡುವ ಸಂಸ್ಥೆ ರಾಜ್ಯಕ್ಕೆ ಬರಬೇಕಿತ್ತು ಅದು ಬರದಿರುವುದು ದುರ್ದೈವದ ಸಂಗತಿ, ಕಾರಣ ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಎಲ್ಲದಕ್ಕೂ ದರ ಪಟ್ಟಿ ಸಿದ್ದವಾಗಿದೆ.  ಮೂಲ ಸೌಕರ್ಯ ಕುಸಿದು ಬಿದ್ದಿದೆ. ಇಲ್ಲಿ ಸಾಮಾಜಿಕವಾಗಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ. ಅಪರಾಧ ಪ್ರಕರಣ ಹೆಚ್ಚಾಗಿದೆ ಹೀಗಾಗಿ ಆಂಧ್ರದಲ್ಲಿ ಅಷ್ಡೊಂದು ಮಾನವ ಸಂಪನ್ಮೂಲ ಅವಕಾಶ ಇಲ್ಲದಿದ್ದರೂ ಆ ಸಂಸ್ಥೆ ಆಂದ್ರಪ್ರದೇಶದ ಕ್ಕೆ ಹೋಯಿತು. ಇದನ್ನೂ ಓದಿ:  ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ: ಮಹೇಶ್ವರ್ ರಾವ್

ನಾವಿದ್ದಾಗ ಪಾಸ್ಕಾನ್ ಕಂಪನಿ ಬಂದಾಗ ಆಂಧ್ರ ಪ್ರದೇಶ, ತಮಿಳುನಾಡು ತಮ್ಮ ರಾಜ್ಯಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದರು. ನಾವು ಎಲ್ಲ ರೀತಿಯ ಸೌಕರ್ಯ ಕೊಟ್ಟು ಅದನ್ನು ಉಳಿಸಿಕೊಂಡಿದ್ದೇವು. ಅದು ಸುಮಾರು ಒಂದು ಲಕ್ಷ ಕೋಟಿ ಬಂಡವಾಳ ಹೂಡಿದೆ‌. ಈಗಾಗಲೇ 30 ಸಾವಿರ ಜನ ಉದ್ಯೋಗ ಪಡೆದಿದ್ದಾರೆ. ಸರ್ಕಾರ ಪ್ರಗತಿಪರವಾಗಿದ್ದರೆ ನಮ್ಮ ರಾಜ್ಯ ಬಿಟ್ಟು ಯೋಜನೆಗಳು ಹೋಗುವುದಿಲ್ಲ. ಈಗಿನ ಸರ್ಕಾರ ನೀವು ಹೋಗೊದಿದ್ದರೆ ಹೋಗಿ ಅಂತ ಬೇಜವಾಬ್ದಾರಿಯಿಂದ ಮಾತನಾಡುವುದು. ಸಿಎಂ ಹಾಗೂ ಸಚಿವರು ಇದರ ಬಗ್ಗೆ ತಲೆ ಕೆಡಸಿಕೊಳ್ಳದಿರುವುದು ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ: ಮಹೇಶ್ವರ್ ರಾವ್
Next: ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಹಾನ ಸಯ್ಯದ್

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.