Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆಂಗಳೂರಿನ ಸೌಲಭ್ಯ ಬಳಸಿಕೊಂಡು ಬೆಳೆದವರು ಟೀಕೆ ಹಾಗೂ ಟ್ವೀಟ್ ಮಾಡುತ್ತಿದ್ದಾರೆ:  ಡಿಕೆಶಿ
  • Bangalore
  • Politics
  • State

ಬೆಂಗಳೂರಿನ ಸೌಲಭ್ಯ ಬಳಸಿಕೊಂಡು ಬೆಳೆದವರು ಟೀಕೆ ಹಾಗೂ ಟ್ವೀಟ್ ಮಾಡುತ್ತಿದ್ದಾರೆ:  ಡಿಕೆಶಿ

Praja Vahini October 19, 2025 1 minute read
WhatsApp Image 2025-10-19 at 20.23.20
Spread the love

ಬೆಂಗಳೂರು: ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು. ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಘನತೆಗೆ ಚ್ಯುತಿ ತರುತ್ತಿರುವವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಕೋರಮಂಗಲದ ವೀರ ಯೋಧ ಉದ್ಯಾನವನದಲ್ಲಿ  ಇಂದು (ಭಾನುವಾರ ಅ. 19) ಹಮ್ಮಿಕೊಂಡಿದ್ದ “ಬೆಂಗಳೂರು ನಡಿಗೆ” ಅಭಿಯಾನದ ಅಂಗವಾಗಿ “ನಾಗರಿಕರೊಂದಿಗೆ ಸಂವಾದ” ನಡೆಸಿ, ಅವರ ಅಹವಾಲುಗಳನ್ನು ಆಲಿಸಿ‌ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದ ಅವರು,

ಬೆಂಗಳೂರಿಗೆ ಬಂದು ಬೆಳೆದಿರುವವರು ಹಿಂದೆ ಹೇಗಿದ್ದೆವು, ಪ್ರಸ್ತುತ ಹೇಗಿದ್ದೇವೆ ಎಂಬುದನ್ನು ಮರೆತು ಟ್ವೀಟ್ ಮಾಡುತ್ತಿದ್ದಾರೆ. ನಾವು ನಮ್ಮ ಮೂಲವನ್ನು ಮರೆಯಬಾರದು, ಮೂಲವನ್ನು ಮರೆತರೆ ಯಶಸ್ಸು ಸಾಧಿಸುವುದಿಲ್ಲ ಎಂದು ನಾನು ನಂಬಿದ್ದೇನೆ” ಎಂದು ತಿಳಿಸಿದರು.

ನಗರದಾದ್ಯಂತ ‌ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂಬುದನ್ನು ಸಾರ್ವಜನಿಕರೇ ಫೋಟೊ‌ ತೆಗೆದು ಅದನ್ನು ಮೊಬೈಲ್ ಆ್ಯಪ್ ಮೂಲಕ ಸರ್ಕಾರದ‌ ಗಮನಕ್ಕೆ ತರುವ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನಾವು ರೂಪಿಸಿದ್ದೇವೆ. ಮಾಧ್ಯಮಗಳೂ ಸಹ ಸುದ್ದಿ ಮಾಡುತ್ತಿವೆ. ನಾನು ಟೀಕೆ ಹಾಗೂ ವಿಮರ್ಶೆಗಳನ್ನು ಸ್ವಾಗತಿಸುತ್ತೇನೆ. ಟೀಕೆಗಳು ಇದ್ದಾಗಲೇ ಪ್ರಜಾಪ್ರಭುತ್ವಕ್ಕೆ ಹೆಚ್ಚು ಮೌಲ್ಯ ಇರುತ್ತದೆ. ಆದರೆ ಕೆಲವರು ವಿಕೋಪಕ್ಕೆ ಹೋಗಿ ಟೀಕೆ ಮಾಡುತ್ತಿದ್ದಾರೆ. ಅಂತಹವರ ಟೀಕೆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಜನ ನಮಗೆ ಅವಕಾಶ ನೀಡಿದ್ದು, ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ ಎಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಯಿತು. ಇತಿಹಾಸ ಗಮನಿಸಿದರೆ ನಾವು ಮಾಡಿದಷ್ಟು ತೀರ್ಮಾನಗಳನ್ನು ಯಾರೂ ಸಹ ಮಾಡಿಲ್ಲ. ನಾವು ಮಾಡಿದ ಕೆಲಸಗಳ ಬಗ್ಗೆ ಸಾರ್ವಜನಿಕರಿಗೆ, ವಿರೋಧ ಪಕ್ಷದವರಿಗೆ ಎಲ್ಲರಿಗೂ ತಿಳಿದಿದೆ. ಇಡೀ ದೇಶದಲ್ಲಿ ಸಮಸ್ಯೆಯಿದೆ. ಅವರೆಲ್ಲಾ ಮಾಧ್ಯಮಗಳನ್ನು ನಿಯಂತ್ರಣ ‌ಮಾಡುತ್ತಿದ್ದಾರೆ. ನಾವು ಮುಕ್ತವಾಗಿ ಬಿಟ್ಟಿದ್ದೇವೆ. ದೆಹಲಿ, ಮುಂಬೈ ಸೇರಿದಂತೆ ಎಲ್ಲಿಗೆ ಬೇಕಾದರೂ ಕರೆದುಕೊಂಡು ಹೋಗಿ ರಸ್ತೆಗಳ ಸಮಸ್ಯೆಗಳನ್ನು ನಾವು ತೋರಿಸುವೆ ಎಂದರು.

 

 

About the Author

Praja Vahini

Editor

View All Posts

Spread the love

Post navigation

Previous: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ
Next: ದೀಪಾವಳಿ ಹಬ್ಬ;  ಹೂವು-ಹಣ್ಣು ಖರೀದಿಗೆ ಮುಗಿಬಿದ್ದ ಜನ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.