Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಬಿದ್ದಿದೆ: ಸಿಎಂ
  • Bangalore
  • Politics
  • State

ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಬಿದ್ದಿದೆ: ಸಿಎಂ

Praja Vahini October 21, 2025 1 minute read
WhatsApp Image 2025-10-21 at 11.43.48
Spread the love

ಬೆಂಗಳೂರು: ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಇಂದು (ಮಂಗಳವಾರ ಅ. 21) ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು.

ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಬೇಕು. ಇದನ್ನೂ ಓದಿ: ಸಂಸದ ರಾಘವೇಂದ್ರ ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ: ಡಿಸಿಎಂ ಡಿಕೆಶಿ

ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಮೂಲಕ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಸ್ಮರಿಸಿ, ನಮಿಸುವುದು ಪ್ರತಿಯೊಬ್ಬರ ಕರ್ತವ್ಯ.

ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ.

ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂ.ಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಸಂಸದ ರಾಘವೇಂದ್ರ ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ: ಡಿಸಿಎಂ ಡಿಕೆಶಿ
Next: ಭ್ರಷ್ಟಾಚಾರದ ಗಂಗೋತ್ರಿಯಾದ ಬಿಜೆಪಿ ನಾಯಕರು: ರಾಮಲಿಂಗ ರೆಡ್ಡಿ

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.