ಬೆಂಗಳೂರು: ಕಳೆದ ಕೆಲವು ದಿನಗಳಿಂದ ಜೆಡಿಎಸ್ ಪಕ್ಷದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆಯ ಕೂಗು ಜೋರಾಗಿ ಕೇಳುತ್ತಿದ್ದು ಇದಕ್ಕೆ ಇದೀಗ ಕೇಂದ್ರ ಸಚಿವರಾಗಿರುವಂತ ಹೆಚ್ ಡಿ ಕುಮಾರಸ್ವಾಮಿ ಅವರು ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಇಂದು (ಗುರುವಾರ ಅಕ್ಟೋಬರ್ 23) ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಗೆ ಬಂದಿಲ್ಲ. ಇದನ್ನೂ ಓದಿ: ರಾಜಕಾರಣಿ ಗುಮ್ಮಡಿ ನರಸಯ್ಯನ ಅವತಾರದಲ್ಲಿ ಕರುನಾಡ ಕಿಂಗ್
ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ರಾಜ್ಯಾಧ್ಯಕ್ಷ ಬದಲಾವಣೆ ಬೇಡ ಅಂತ ಒಂದು ವಿಂಗ್ ಇದೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ ಜವಾಬ್ದಾರಿ ಕೊಡಬೇಕು ಅಂತ ಇದೆ. ಆದರೆ ಇದ್ಯಾವುದರ ಬಗ್ಗೆ ಚರ್ಚೆ ಆಗಿಲ್ಲ, ಸದ್ಯಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಬದಲಾವಣೆ ಇಲ್ಲ ಎಂದು ತಿಳಿಸಿದರು.
