ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕೂಗು ಜೋರಾಗಿ ಕೇಳುತ್ತಿರುವ ಬೆನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಅಗಲಿದ್ದಾರೆ ಎಂಬ ಹೇಳಿಕೆಗೆ ಇದೀಗ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಇನ್ನು ಯತೀಂದ್ರ ಅವರ ಹೇಳಿಕೆಗೆ ಸಚಿವ ಜಾರಕಿಹೊಳಿಯವರು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮದು ಏನೇ ಇದ್ದರೂ 2028ಕ್ಕೆ ಸಿಎಂ ಸ್ಥಾನದ ಕ್ಲೈಮ್ ಮಾಡುತ್ತೇವೆ. ಯತೀಂದ್ರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇದನ್ನೂ ಓದಿ: ಸಾಹುಕಾರ್ ಪರ ಪರಂ ಬ್ಯಾಟಿಂಗ್..!
ಯತಿಂದ್ರ ಅವರು ಅವರ ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ಅಂತಿಮವಾಗಿ ಯಾರು ನಾಯಕ ಎನ್ನುವುದನ್ನು ಪಕ್ಷದ ಶಾಸಕರು ನಿರ್ಧಾರ ಮಾಡುತ್ತಾರೆ. ಅಹಿಂದ ನಾಯಕತ್ವ ಇಲ್ಲದೇ ಪಕ್ಷ ಸಂಘಟನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು
